ಎಚ್. ಡಿ. ಕುಮಾರಸ್ವಾಮಿ 
ರಾಜ್ಯ

Channapatna Bypoll: ನಿಖಿಲ್ ಚುನಾವಣೆ ವೆಚ್ಚಕ್ಕಾಗಿ 50 ಕೋಟಿ ಬೇಡಿಕೆ; ಎಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ.

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಹಾಗೂ ಮಾಜಿ ಪರಿಷತ್‌ ಸದಸ್ಯ ರಮೇಶ್ ಗೌಡ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿರುವ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ತಾತಾ ಎಂಬುವರು ಇಬ್ಬರ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ಫಿಕ್ಸ್ ಆಗಿದೆ. ಉಪಚುನಾವಣೆ ಪ್ರತಿಷ್ಠೆಯ ವಿಷಯವಾಗಿದ್ದು 50 ಕೋಟಿ ರೂ. ಹೊಂದಿಸಿಕೊಡಬೇಕು. ಹಣ ಹೊಂದಿಸಿ ಕೊಡದಿದ್ದರೆ ನಾನು ಏನು ಮಾಡುತ್ತೇನೋ ಗೊತ್ತಿಲ್ಲ. ನೀನು ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮ ನಡೆಸುವುದಷ್ಟೇ ಅಲ್ಲ. ನೀನು ಇಲ್ಲಿ ಬದುಕುವುದೇ ಕಷ್ಟವಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದೇ ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ ಉದ್ಯಮಿ ವಿಜಯ್ ತಾತಾ, ರಮೇಶ್ ಗೌಡ ಅವರೂ ಕೂಡ ತಮ್ಮಿಂದ ಹಣ ಕೀಳಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇಬ್ಬರೂ ಜನಪ್ರತಿನಿಧಿಗಳಿಂದ ತಮ್ಮನ್ನು ಹಾಗೂ ತಮ್ಮ ಕುಟುಂಬವನ್ನು ಕಾಪಾಡಬೇಕು. ತಮಗೆ ರಕ್ಷಣೆ ಒದಗಿಸಬೇಕು ಎಂದು ಅವರು ದೂರಿನಲ್ಲಿ ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ಕೆಲವು ಜಾಲತಾಣಗಳು ವರದಿ ಮಾಡಿವೆ. ಹೆಚ್‌ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ಮಾಡಿ 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ನಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಿ ಹೆಚ್ ಡಿ ಕುಮಾರ ಸ್ವಾಮಿ ಮತ್ತು ರಮೇಶ್ ಗೌಡ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ನಾಳೆ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ-Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT