ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ವಿಜಯ್ ತಾತಾ ವಿರುದ್ಧ ಜೆಡಿಎಸ್ ಪ್ರತಿದೂರು: ಬೀದಿ ನಾಯಿ, ನರಿಗೆಲ್ಲಾ ಉತ್ತರ ಕೊಡೋಕಾಗುತ್ತಾ? ಕನಲಿ ಕೆಂಡವಾದ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಜಯ್ ತಾತಾ ಸುಳ್ಳು ದೂರು ನೀಡಿದ್ದಾರೆ ಎಂದು ರಮೇಶ್ ಗೌಡ ಆರೋಪಿಸಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಖರ್ಚಿಗಾಗಿ 50 ಕೋಟಿ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಉದ್ಯಮಿ ವಿಜಯ್ ತಾತಾ ಕೊಟ್ಟಿರುವ ದೂರಿಗೆ ವಿರುದ್ಧವಾಗಿ ಮಾಜಿ ವಿಧಾನಪರಿಷತ್​ ಸದಸ್ಯ ರಮೇಶ್ ಗೌಡ ಅಮೃತಹಳ್ಳಿ ಪೊಲೀಸ್ ಠಾಣೆಗೆ ಪ್ರತಿ ದೂರು ದಾಖಲಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಜಯ್ ತಾತಾ ಸುಳ್ಳು ದೂರು ನೀಡಿದ್ದಾರೆ ಎಂದು ರಮೇಶ್ ಗೌಡ ಆರೋಪಿಸಿದ್ದಾರೆ. ಪೊಲೀಸರು ದೂರನ್ನು ಸ್ವೀಕರಿಸಿದ್ದಾರೆ. ಆದರೆ, ಇದುವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇನ್ನು ದೂರು ನೀಡಿರುವ ವಿಜಯ್ ತಾತಾ, ಹೊರಗಿನವರಲ್ಲ. 2018 ರಿಂದ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ಹೆಚ್​ಡಿ ಕುಮಾರಸ್ವಾಮಿ ಮತ್ತು ಮಾಜಿ ಎಂಎಲ್​ಸಿ ರಮೇಶ್ ಗೌಡ ವಿರುದ್ಧ ದೂರು ನೀಡಿದ್ದಾರೆ. ದೂರಿನ ಅನ್ವಯ ಇಬ್ಬರ ವಿರುದ್ಧವೂ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.

ವಿಜಯ್ ತಾತಾ ಆರೋಪದ ಬಗ್ಗೆ ಪ್ರಶ್ನಿಸುತ್ತಿದ್ದಂತೆಯೇ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕನಲಿ ಕೆಂಡವಾಗಿದ್ದಾರೆ. ‘ಬೀದಿ ನಾಯಿ, ನರಿಗೆಲ್ಲಾ ಉತ್ತರ ಕೊಡೋಕೆ ಆಗುತ್ತಾ? ಅವನು ಯಾರು? ಅವನ ಬಗ್ಗೆ ಯಾಕೆ ಚರ್ಚೆ ಮಾಡಲಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel