ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ನಿಲ್ಲಿಸಿದ್ದ ಸೈಕಲ್ ಕದಿಯಲು ಯತ್ನಿಸಿ ಸಿಕ್ಕಿಬಿದ್ದ ವ್ಯಕ್ತಿ!

ಸಿಕ್ಕಿಬಿದ್ದ ಕಳ್ಳನನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿರುವ ವಸ್ತುಗಳನ್ನು ಕದಿಯಲು ಯತ್ನಿಸಿದ ನಾಲ್ಕನೇ ಪ್ರಕರಣ ಇದಾಗಿದೆ.

ಬೆಂಗಳೂರು: ಮೆಟ್ರೊದ ನೇರಳೆ ಮಾರ್ಗದ ಕುಂದಲಹಳ್ಳಿ ನಿಲ್ದಾಣದಲ್ಲಿ ಗುರುವಾರ ಬೆಳಗ್ಗೆ 6.30ಕ್ಕೆ ಪಾರ್ಕಿಂಗ್ ಪ್ರದೇಶದಲ್ಲಿದ ಸೈಕಲ್ ಬೀಗ ಮುರಿದು ಕಳ್ಳತನ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಹಿಡಿದಿದ್ದಾರೆ.

ಸಿಕ್ಕಿಬಿದ್ದ ಕಳ್ಳನನ್ನು ಎಚ್‌ಎಎಲ್ ಪೊಲೀಸ್ ಠಾಣೆಗೆ ಒಪ್ಪಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ಮೆಟ್ರೋ ನಿಲ್ದಾಣಗಳಲ್ಲಿರುವ ವಸ್ತುಗಳನ್ನು ಕದಿಯಲು ಯತ್ನಿಸಿದ ನಾಲ್ಕನೇ ಪ್ರಕರಣ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸೆಪ್ಟಂಬರ್ 27 ರಂದು ಇಬ್ಬರು ಕಳ್ಳರು ಮೆಟ್ರೋ ಭದ್ರತಾ ಸಿಬ್ಬಂದಿಗೆ ಕೈಗೆ ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

ಇವರಿಬ್ಬರು ಬಸ್ ನಿಲ್ದಾಣದ ಕಡೆಯಿಂದ ಬೇಲಿ ಏರಿ ಮೆಟ್ರೋ ನಿಲ್ದಾಣ ಪ್ರವೇಶಿಸಿದ್ದಾರೆ. ಕೆಎಸ್‌ಆರ್‌ ರಸ್ತೆ ನಿಲ್ದಾಣದ ಬಳಿ ವಾಸವಿದ್ದ ಮೊದಲ ಕಳ್ಳ ಎಸ್‌ ಚಂದನ್‌ ಡೀಸೆಲ್‌ ಜನರೇಟರ್‌ ಕೊಠಡಿಯಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಬೆಳಗ್ಗೆ 6.30ರ ಸುಮಾರಿಗೆ ಸಿಕ್ಕಿಬಿದ್ದಿದ್ದು, ವಿಚಾರಣೆ ವೇಳೆ ಈ ಹಿಂದೆ ಸಣ್ಣ ಏಣಿ ಹಾಗೂ ಮೂರು ಪೈಂಟ್‌ ಟಿನ್‌ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಅದೇ ದಿನ ಬೆಳಗ್ಗೆ 7.45 ರ ಸುಮಾರಿಗೆ, ಎರಡನೇ ಕಳ್ಳನು ನಿಲ್ದಾಣದ ಹೊರಗೆ ಚೇಂಬರ್ ಪ್ಲೇಟ್ ಅನ್ನು ಕದಿಯಲು ಪ್ರಯತ್ನಿಸುತ್ತಿದ್ದಾಗ ಮಹಿಳಾ ಹೋಮ್ ಗಾರ್ಡ್‌ಗೆ ಸಿಕ್ಕಿಬಿದ್ದಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಎರಡನೇ ಕಳ್ಳ ದೀಪಕ್(24) ಮೈಸೂರಿನ ಆಜಾದ್ ನಗರದ ನಿವಾಸಿ ಎಂದು ಗುರುತಿಸಲಾಗಿದೆ. ಬಿಎಂಆರ್‌ಸಿಎಲ್‌ ಇಬ್ಬರನ್ನು ಉಪ್ಪಾರಪೇಟೆ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದ್ದು, ದೂರು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಫ್ರಿಕಾದಲ್ಲಿ ಮತ್ತೊಂದು ದಂಗೆ: ಬೆನಿನ್ ಅಧ್ಯಕ್ಷನ ಪದಚ್ಯುತಿ, ಆಡಳಿತ ಮಿಲಿಟರಿ ವಶಕ್ಕೆ, TV ಯಲ್ಲಿ ಕಾಣಿಸಿಕೊಂಡ ಸೈನಿಕರು ಮಾಡಿದ್ದೇನು?

ದಂಪತಿಗಳು ಒಂದು ಅಥವಾ ಎರಡು ಮಕ್ಕಳ ಮಾತ್ರ ಮಾಡಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

610 ಕೋಟಿ ರೂ. ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

ಕಲಬುರಗಿ: ಅನ್ನದಾತರ ಸಮಸ್ಯೆ ಮುಂದಿಟ್ಟು,'ಪ್ರಿಯಾಂಕ್ ಖರ್ಗೆ ತವರಿ'ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

SCROLL FOR NEXT