ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: BBMP ಗುತ್ತಿಗೆದಾರರ ಶೇ 25ರಷ್ಟು ಬಾಕಿ ಬಿಲ್‌ಗಳ ಪಾವತಿಗೆ ಸರ್ಕಾರ ಮುಂದು?

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ತನಿಖೆ ಪ್ರಗತಿಯನ್ನು ಗಮಿಸಿದ್ದು, ಬಾಕಿ ಉಳಿದಿರುವ ಶೇ.25ರಷ್ಟು ಬಿಲ್‌ಗಳನ್ನು ತೆರವುಗೊಳಿಸುವಂತೆ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂಬುದು ತಿಳಿದುಬಂದಿದೆ.

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ನಡೆದಿರುವ ಲಂಚ ಆರೋಪ ಕುರಿತು ನಾಗಮೋಹನ್ ದಾಸ್ ಸಮಿತಿ ತನಿಖೆ ನಡೆಸುತ್ತಿದ್ದು, ತನಿಖೆ ಬೆನ್ನಲ್ಲೇ ಸರ್ಕಾರ ಬಾಕಿ ಉಳಿಸಿಕೊಂಡಿರುವ ಶೇ 25ರಷ್ಟು ಬಿಲ್‌ಗಳನ್ನು ಶೀಘ್ರಗತಿಯಲ್ಲಿ ಪಾವತಿ ಮಾಡಬೇಕೆಂದು ಬಿಬಿಎಂಪಿ ಗುತ್ತಿಗೆದಾರರು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಮಾತನಾಡಿ, ತನಿಖೆ ಪ್ರಗತಿಯನ್ನು ಗಮಿಸಿದ್ದು, ಬಾಕಿ ಉಳಿದಿರುವ ಶೇ.25ರಷ್ಟು ಬಿಲ್‌ಗಳನ್ನು ತೆರುವುಗೊಳಿಸುವಂತೆ ಸಮಿತಿಯು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂಬುದು ತಿಳಿದುಬಂದಿದೆ.

ಸಾಕಷ್ಟು ಗುತ್ತಿಗೆದಾರರು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಸರ್ಕಾರ ಈ ಕುರಿತು ಶೀಘ್ರಗತಿಯಲ್ಲಿ ಆದೇಶ ಹೊರಡಿಸುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್.ಪ್ರಹ್ಲಾದ್ ಅವರು ಮಾತನಾಡಿ, ಈ ವಿಚಾರ ತಮ್ಮ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮಾತನಾಡಿ, ಈ ಸಮಸ್ಯೆ ಬಗ್ಗೆ ರಾಜ್ಯ ಸರ್ಕಾರವೇ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಈ ಹಿಂದೆ ಗುತ್ತಿಗೆದಾರರು ಉಪವಾಸ ಸತ್ಯಾಗ್ರಹ ನಡೆಸಿದ್ದರು. ಬಿಬಿಎಂಪಿ ವ್ಯಾಪ್ತಿಯಲ್ಲಿನ ಎಲ್ಲ ಮೂಲಸೌಕರ್ಯ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ತಿಳಿಸಿದ್ದರು. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು ಸಾಧಿಸಿದು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ