ಬಿಜೆಪಿ ಶಾಸಕ ಮುನಿರತ್ನ  
ರಾಜ್ಯ

ಬಿಜೆಪಿ ಶಾಸಕ ಮುನಿರತ್ನಗೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನ: ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಇಂದು ಎಸ್​ಐಟಿ ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮುನಿರತ್ನಗೆ 14 ದಿನ ಅಂದರೆ ಅಕ್ಟೋಬರ್ 19ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಇಂದು ಎಸ್​ಐಟಿ ಅಧಿಕಾರಿಗಳು ಮುನಿರತ್ನ ಅವರಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರು ಪಡಿಸಿದ್ದು, ಮತ್ತೆ ಮುನಿರತ್ನರನ್ನು ಕಸ್ಟಡಿಗೆ ನೀಡುವಂತೆ ಎಸ್​ಐಟಿ ಅಧಿಕಾರಿಗಳು ಕೋರ್ಟ್​ಗೆ ಮನವಿ ಮಾಡಿದರು. ಆದ್ರೆ, ಕೋರ್ಟ್​, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಮುನಿರತ್ನಗೆ ಮನೆ ಊಟಕ್ಕೆ ಅವಕಾಶ ಮಾಡಿಕೊಡುವಂತೆ ಅವರ ಪರ ವಕೀಲರು ಕೋರ್ಟ್​​ಗೆ ಮನವಿ ಮಾಡಿದ್ದರು. ಈ ಬಗ್ಗೆ ಜೈಲು ಅಧಿಕಾರಿಗಳಿಗೆ ಮನವಿ ಮಾಡಲು ಕೋರ್ಟ್​ ಸೂಚಿಸಿದ್ದು, ಒಂದು ವೇಳೆ ಅನುಮತಿ ನೀಡದಿದ್ದರೆ ಕೋರ್ಟ್​ನಲ್ಲಿ ಅರ್ಜಿ ಹಾಕಿ ಎಂದು ಹೇಳಿದೆ.

ಅತ್ಯಾಚಾರ, ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಬಂಧಿಸಲಾಗಿತ್ತು. ಕಗ್ಗಲಿಪುರ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ರೆಸಾರ್ಟ್‌ನಲ್ಲಿ ತಮ್ಮ ಮೇಲೆ ಮುನಿರತ್ನ ಅತ್ಯಾಚಾರ ನಡೆಸಿದ್ದರು ಎಂದು ಆರೋಪಿಸಿ 40 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಬಂಧನಕ್ಕೊಳಪಡಿಸಲಾಗಿತ್ತು.

ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಮತ್ತು ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಮುನಿರತ್ನ ಅವರು ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಜೈಲಿನಿಂದ ಆಚೆ ಬಂದಿದ್ದರು. ನಂತರ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ