ಬೆಂಗಳೂರು: ಪಿಜಿ 5ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ
ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ. ಯಾರೂ ಅಲ್ಲ. ಈ ಬಗ್ಗೆ ತನಿಖೆ ನಡೆದಂತೆ ಹಾಗೂ ಶವವನ್ನು ಪೋಷಕರಿಗೆ ಹಸ್ತಾಂತರಿಸುವಂತೆ ತಿಳಿಸಿದ್ದಾರೆ.
ಬೆಂಗಳೂರು: ಪೇಯಿಂಗ್ ಗೆಸ್ಟ್ ವಸತಿಗೃಹದ ಐದನೇ ಮಹಡಿಯಿಂದ ಜಿಗಿದು ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬರು ಆತ್ಮಹತ್ಯೆ ಶರಣಾಗಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಗೌತಮಿ (25) ಆತ್ಮಹತ್ಯೆಗೆ ಶರಣಾದ ಯುವತಿ, ಗುರುವಾರ ರಾತ್ರಿ 7 ಗಂಟೆ ಸುಮಾರಿಗೆ ಪ್ರಶಾಂತ್ ಲೇಔಟ್ ನಲ್ಲಿ ಘಟನೆ ನಡೆದಿದೆ.
ಆಂಧ್ರಪ್ರದೇಶದ ಕಡಪ ಮೂಲದ ಯುವತಿ, ನಗರದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ಬರೆದಿಟ್ಟಿದ್ದು, ನನ್ನ ಸಾವಿಗೆ ನಾನೇ ಕಾರಣ. ಯಾರೂ ಅಲ್ಲ. ಈ ಬಗ್ಗೆ ತನಿಖೆ ನಡೆದಂತೆ ಹಾಗೂ ಶವವನ್ನು ಪೋಷಕರಿಗೆ ಹಸ್ತಾಂತರಿಸುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು. ಬಳಿಕ ಪೋಷಕರಿಗೆ ಹಸ್ತಾಂತರಿಸಿದರು. ಈ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದು, ಸಾವಿಗೆ ಕಾರಣ ಪತ್ತೆ ಮಾಡುತ್ತಿದ್ದಾರೆ.