ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: BBMP ವ್ಯಾಪ್ತಿಯಲ್ಲಿ ಬೀದಿ ವ್ಯಾಪಾರಿಗಳ ಸಮೀಕ್ಷೆ ಪ್ರಾರಂಭ

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಂಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ 600ಕ್ಕೂ ಹೆಚ್ಚು ಗಣತಿದಾರರನ್ನು ನಿಯೋಸಿಕೊಳ್ಳಲಾಗಿದೆ.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಕಲ್ಯಾಣ ವಿಭಾಗದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ-2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ-2020 ರಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನಗರ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಆರಂಭಿಸಿದೆ.

ಪಾಲಿಕೆಯ ಎಲ್ಲಾ 8 ವಲಯಗಳಲ್ಲಿ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಕೈಗೊಂಡಿದ್ದು, ಸಮೀಕ್ಷಾ ಕಾರ್ಯಕ್ಕಾಗಿ 600ಕ್ಕೂ ಹೆಚ್ಚು ಗಣತಿದಾರರನ್ನು ನಿಯೋಸಿಕೊಳ್ಳಲಾಗಿದೆ. ಮೊಬೈಲ್ ತಂತ್ರಾಂಶದ ಮೂಲಕ ಸಮೀಕ್ಷೆ ನಡೆಸಲಾಗುತ್ತಿದ್ದು, ಇದುವರೆಗೆ ವಲಯವಾರು ಸುಮಾರು 1800 ಬೀದಿ ಬದಿ ವ್ಯಾಪಾರಿಗಳನ್ನು ಸಮೀಕ್ಷೆ ಮೂಲಕ ಗುರುತಿಸಲಾಗಿದೆ.

ಸಮೀಕ್ಷೆಯ ಅನುಸಾರ ಅರ್ಹ ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರಗಳನ್ನು ವಿತರಿಸಲಾಗುವುದು. ಅಲ್ಲದೇ ವಲಯ ಮಟ್ಟದಲ್ಲಿ ಪಟ್ಟಣ ಮಾರಾಟ ಸಮಿತಿಗಳನ್ನು ರಚಿಸಿ, ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ-2014 ಮತ್ತು ಕರ್ನಾಟಕ ಬೀದಿ ಬದಿ ವ್ಯಾಪಾರಿಗಳ(ಜೀವನೋಪಾಯ ಸಂರಕ್ಷಣೆ, ಬೀದಿ ಬದಿ ವ್ಯಾಪಾರದ ನಿಯಂತ್ರಣ ಮತ್ತು ಪರವಾನಗಿ) ಯೋಜನೆ-2020 ರಂತೆ ಬೀದಿ ವ್ಯಾಪಾರಿಗಳ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತದೆ.

ಕಲ್ಯಾಣ ವಿಭಾಗದಿಂದ ನಿಯೋಜಿಸಿರುವ ಗಣತಿದಾರರು ಸಮೀಕ್ಷೆ ಮಾಡುವ ಸಮಯದಲ್ಲಿ ಬೀದಿ ಬದಿ ವ್ಯಾಪಾರಿಗಳು ಸಹಕಾರ ನೀಡಬೇಕಿದ್ದು, ಸಮೀಕ್ಷೆ ಸಮಯದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್, ಕುಟುಂಬ ಪಡಿತರ‌ ಚೀಟಿ, ಕುಟುಂಬ ಸದಸ್ಯರ ಮಾಹಿತಿ, ಸ್ವಯಂ ಘೋಷಣೆ ಪ್ರಮಾಣ ಪತ್ರದ ಪ್ರತಿಗಳನ್ನು ಗಣತಿದಾರರಿಗೆ ಒದಗಿಸಬೇಕು ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ಹೇಳಿದ್ದಾರೆ.

ಪಾಲಿಕೆಯ ಕಲ್ಯಾಣ ವಿಭಾಗದಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಈ ಬಗ್ಗೆ ಬೀದಿ ಬದಿ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೀದಿ ನಾಟಕಗಳನ್ನು ಹಮ್ಮಿಕೊಂಡು ಅವರಿಗೆ ಸಿಗುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ.

ಪಿಎಂ ಸ್ವನಿಧಿ, ಪಾಲಿಕೆಯ ಕಲ್ಯಾಣ ವಿಭಾಗದಿಂದ ಇ-ಮಾರಾಟ ವಾಹನ ಖರೀದಿಗೆ ಸಹಾಯಧನ, ಮನೆ/ಅಮೃತ ಮಹೋತ್ಸವ ಮನೆ ಯೋಜನೆಗೆ ಸಹಾಯಧನ, ಗಂಭೀರ ಸ್ವರೂಪ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ವೈದ್ಯಕೀಯ ವೆಚ್ಚ ಮರು ಪಾವತಿ, ಕೌಶಲ ತರಬೇತಿ ಕಾರ್ಯಕ್ರಮ, ಬೀದಿ ಬದಿ ವ್ಯಾಪಾರಿಗಳ ಮಕ್ಕಳ ಶಿಕ್ಷಣಕ್ಕೆ ಶುಲ್ಕ ಮರುಪಾವತಿ ಸಹಿತ ಬೀದಿ ಬದಿ ವ್ಯಾಪಾರಿಗಳಿಗೆ ಇರುವ ಸೌಲಭ್ಯಗಳ ಬಗ್ಗೆ ಬೀದಿನಾಟಕ, ಕರಪತ್ರ ವಿತರಣೆ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT