ಮೆಟ್ರೋ ರೈಲು ಸಾಂದರ್ಭಿಕ ಚಿತ್ರ 
ರಾಜ್ಯ

BMRCL: ಹಳದಿ ಮಾರ್ಗ; ಜನವರಿ 2025 ರಲ್ಲಿ ರೈಲು ಸಂಚಾರ ಆರಂಭ!

ಕೋಚ್‌ಗಳ ಕೊರತೆ ಹಿನ್ನೆಲೆಯಲ್ಲಿ ಆರಂಭದಲ್ಲಿ ಮೂರು ರೈಲುಗಳನ್ನು ಮಾತ್ರ ಓಡಿಸಲು ನಿರ್ಧರಿಸಲಾಗಿದೆ. ಪ್ರತಿ 30 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಬೆಂಗಳೂರು: ಆರ್‌ವಿ ರಸ್ತೆಯಿಂದ ಎಲೆಕ್ಟ್ರಾನಿಕ್ಸ್ ಸಿಟಿ ಮೂಲಕ ಬೊಮ್ಮಸಂದ್ರದವರೆಗೆ ನಮ್ಮ ಮೆಟ್ರೋ ಹಳದಿ ಮಾರ್ಗ ಬಹುತೇಕ ಪೂರ್ಣಗೊಂಡಿದ್ದು, 2025 ರ ಜನವರಿಯಿಂದ ಮೆಟ್ರೋ ರೈಲುಗಳ ಸಂಚಾರ ಪ್ರಾರಂಭವಾಗಲಿದೆ ಎಂದು BMRCL ಶನಿವಾರ ಪ್ರಕಟಿಸಿದೆ.

ಕೋಚ್‌ಗಳ ಕೊರತೆ ಹಿನ್ನೆಲೆಯಲ್ಲಿ ಆರಂಭದಲ್ಲಿ ಮೂರು ರೈಲುಗಳನ್ನು ಮಾತ್ರ ಓಡಿಸಲು ನಿರ್ಧರಿಸಲಾಗಿದೆ. ಪ್ರತಿ 30 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

18.82 ಕಿ. ಮೀ. ಉದ್ದದ ಹಳದಿ ಮಾರ್ಗದಲ್ಲಿ ಎಲ್ಲಾ ಸಿವಿಲ್ ಮತ್ತು ಸಿಸ್ಟಂ ಕಾಮಗಾರಿಗಳು ಗಣನೀಯವಾಗಿ ಪೂರ್ಣಗೊಂಡಿವೆ. ಡಿಸೆಂಬರ್ ನಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರಿಂದ ಶಾಸನಬದ್ಧ ಪರೀಕ್ಷೆ ನಡೆಸಲು ಯೋಜಿಸಲಾಗಿದೆ. ನವೆಂಬರ್- ಡಿಸೆಂಬರ್ ವೇಳೆಗೆ ಮೂರು ರೈಲು ಸೆಟ್ ಲಭ್ಯವಿರುತ್ತವೆ ಎಂದು ತಿಳಿಸಲಾಗಿದೆ.

ರೈಲ್ವೆ ಸುರಕ್ಷತಾ ಮಂಡಳಿಯು ಈಗಾಗಲೇ ಸಿಗ್ನಲಿಂಗ್‌, ಟ್ರ್ಯಾಕ್ಷನ್‌ ಮತ್ತು ಬ್ರೇಕಿಂಗ್‌ ಪರೀಕ್ಷೆಗಳಿಗೆ ತಾಂತ್ರಿಕ ಮಂಜೂರಾತಿ ನೀಡಿದೆ. ಈ ಮಾರ್ಗಕ್ಕೆ ಅಗತ್ಯವಿರುವ ಬೋಗಿಗಳನ್ನು ನಿರ್ಮಿಸಿಕೊಡುವ ಹೊಣೆ ಹೊತ್ತಿರುವ ಟಿಟಾಗರ್‌ ವ್ಯಾಗನ್ಸ್‌ ಸಂಸ್ಥೆ ಮುಂದಿನ ವರ್ಷದ ಮಾರ್ಚ್ ನಿಂದ ಪ್ರತಿ ತಿಂಗಳು ಎರಡು ಕೋಚ್ ಗಳನ್ನು ಪೂರೈಕೆ ಮಾಡಲಿದೆ. 2025ರ ಆಗಸ್ಟ್‌ ವೇಳೆಗೆ ಈ ಮಾರ್ಗಕ್ಕೆ ಬೇಕಾಗಿರುವ ತಲಾ 6 ಬೋಗಿಯ 15 ರೈಲುಗಳು ಸರಬರಾಜಾಗಲಿವೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ