ಕಾವೂರು: ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಬಿಟ್ಟು ನಾಪತ್ತೆಯಾಗಿದ್ದ ಉದ್ಯಮಿ ಬಿ.ಎಂ.ಮಮ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ.
ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಕೋಸ್ಟ್ ಗಾರ್ಡ್ ಸೇರಿದಂತೆ ಸ್ಥಳೀಯ ನಾಡದೋಣಿ ಮೀನುಗಾರರು ಸೋಮವಾರ ಬೆಳಗ್ಗೆ 6 ಗಂಟೆಯಿಂದ ಹುಡುಕಾಟದಲ್ಲಿ ತೊಡಗಿದ್ದರು. ಮಂಗಳೂರು - ಕೂಳೂರು ಸೇತುವೆ ಬಳಿ ಬೆಳಿಗ್ಗೆ 10:40 ರ ಸುಮಾರಿಗೆ ಸ್ಥಳೀಯ ಮೀನುಗಾರರ ದೋಣಿಗೆ ಮೃತದೇಹ ಪತ್ತೆಯಾಗಿದೆ. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ 173ರ ಅಡಿ ಎಫ್ ಐ ಆರ್ ದಾಖಲಾಗಿದೆ.
ನಿನ್ನೆ ಮಂಗಳೂರಿನ ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಅವರ ಕಾರು ಪತ್ತೆಯಾಗಿತ್ತು. ಬ್ರಿಡ್ಜ್ ಮೇಲೆ KA19 MG0004 ಸಂಖ್ಯೆಯ BMW X5 ಕಾರು ಪತ್ತೆಯಾಗಿತ್ತು. ಈಜು ತಜ್ಞ ಈಶ್ವರ್ ಮಲ್ಪೆ ಅವರು ಮುಮ್ತಾಜ್ ಶೋಧ ಕಾರ್ಯಾಚರಣೆ ನಡೆಸಿದ್ದರು. ಫಲ್ಗುಣಿ ನದಿಯಲ್ಲಿ ಸ್ಕೂಬಾ ಡೈವ್ ಮಾಡಿ ಶೋಧ ನಡೆಸ್ತಿದ್ದರು. ಸದ್ಯ ಈಗ ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ. ಸಹೋದರನನ್ನ ನೆನೆದು ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.
ಮೃತ ಮುಮ್ತಾಜ್ ಅಲಿ ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಮಾಜಿ MLC ಆಗಿರುವ ಬಿ.ಎಮ್.ಫಾರೂಕ್ ಅವರ ತಮ್ಮ.ಇವರು ಭಾನುವಾರ ಬೆಳ್ಳಂಬೆಳಗ್ಗೆ ನಾಪತ್ತೆಯಾಗಿದ್ದರು.