ಶಿವಮೂರ್ತಿ ಮುರುಘಾ ಸ್ವಾಮೀಜಿ 
ರಾಜ್ಯ

ಪೋಕ್ಸೋ ಪ್ರಕರಣ: 6 ತಿಂಗಳ ನಂತರ ಚಿತ್ರದುರ್ಗದ ಮುರುಘಾಶ್ರೀ ಜೈಲಿನಿಂದ ಬಿಡುಗಡೆ

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶವನ್ನು ಹೊರಡಿಸಿತ್ತು.

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಿಡುಗಡೆಯಾಗಿ ಜೈಲಿನಿಂದ ಹೊರಬಂದಿದ್ದಾರೆ.

ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಪಟ್ಟ ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆ ಮಾಡುವಂತೆ ಆದೇಶವನ್ನು ಹೊರಡಿಸಿತ್ತು. ಈ ಹಿಂದೆ ಹೈಕೋರ್ಟ್ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಸಾಕ್ಷಗಳ ವಿಚಾರಣೆ ಮುಗಿಯುವವರೆಗೂ ಬಂಧನದಲ್ಲಿಡಲು ಸುಪ್ರೀಂಕೋರ್ಟ್ ಕಳೆದ ಏಪ್ರಿಲ್ 23ರಂದು​ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಶ್ರೀಗಳು ಜೈಲಿಗೆ ಮತ್ತೆ ಹೋಗಬೇಕಾಗಿ ಬಂದಿತ್ತು.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯರಿಬ್ಬರು ಸೇರಿದಂತೆ 12 ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ಜಾಮೀನಿನ ಆದೇಶದ ಪ್ರಕಾರ ಮುರುಘಾಶ್ರೀ ಬಿಡುಗಡೆ ಮಾಡಬೇಕಿತ್ತು. ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ಕೈ ಸೇರಿದ್ದು ಪ್ರಕ್ರಿಯೆಗಳು ಮುಗಿದ ನಂತರ ಶ್ರೀಗಳು ಜೈಲಿನಿಂದ ಹೊರಬಂದಿದ್ದಾರೆ. ಇನ್ನು ಹೈಕೋರ್ಟ್ ಚಿತ್ರದುರ್ಗ ಜಿಲ್ಲೆ ವ್ಯಾಪ್ತಿಯಲ್ಲಿ ಮುರುಘಾಶ್ರೀ ಇರುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದ್ದರಿಂದ ಅವರು ದಾವಣಗೆರೆಗೆ ತೆರಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

IIT Bombay ವಿದ್ಯಾರ್ಥಿ ನಕಲು ಮಾಡಿದ್ದನ್ನು ತಡೆದಿದ್ದೇ ತಪ್ಪಾ? ಪ್ರೊಫೆಸರ್ ವಿರುದ್ಧ ಪ್ರತಿಭಟನೆ; ಯಾರು ಈ ಪ್ರೊ. Suryanarayana Doolla?

Bihar horror: ಕೋಚಿಂಗ್‌ ಸೆಂಟರ್`ನಿಂದ ಮರಳುತ್ತಿದ್ದ ಅಪ್ರಾಪ್ತ ಜೋಡಿ ಅಡ್ಡಗಟ್ಟಿದ ಗುಂಪು, ಲೈಂಗಿಕ ಕಿರುಕುಳ

ಧರ್ಮಸ್ಥಳ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ..!

TMC ಹೆಸರು-ಚಿಹ್ನೆ ಫ್ರೀಜ್; ಚುನಾವಣಾ ಆಯೋಗದ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಆಕ್ಷೇಪ, ತುರ್ತು ವಿಚಾರಣೆಗೆ ಸುಪ್ರೀಂ ಒಪ್ಪಿಗೆ..!

ಭೂಮಿಯನ್ನು ಸುತ್ತುತ್ತಿರುವ ಆಯುಧಗಳು: ಭಾರತದ ಮುಂದಿರುವ ಸವಾಲುಗಳೇನು? (ಜಾಗತಿಕ ಜಗಲಿ)