ದರ್ಶನ್ 
ರಾಜ್ಯ

ಇದು ದರ್ಶನ್ ರಕ್ತಚರಿತ್ರೆ: ನಟನ ಕ್ರೌರ್ಯ ಬಿಚ್ಚಿಟ್ಟ ಎಸ್​ಪಿಪಿ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ದರ್ಶನ್ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಇಂದು ಎಸ್​ಪಿಪಿ ಪ್ರಸನ್ನ ಕುಮಾರ್ ಉತ್ತರಗಳನ್ನು ನೀಡಿದರು.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದೆ.

ದರ್ಶನ್ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಇಂದು ಎಸ್​ಪಿಪಿ ಪ್ರಸನ್ನ ಕುಮಾರ್ ಉತ್ತರಗಳನ್ನು ನೀಡಿದರು. ಎಸ್​ಪಿಪಿ ಸುದೀರ್ಘ ವಾದ ಮಂಡಿಸಿದ್ದರಿಂದ ಅಂತಿಮವಾಗಿ ನ್ಯಾಯಾಲಯದ ಸಮಯ ಮೀರಿದ ಕಾರಣ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪ್ರಕರಣದ ವಿಚಾರಣೆಯನ್ನು ನಾಳೆ ಮಧ್ಯಾಹ್ನ 12:30ಕ್ಕೆ ಮುಂದೂಡಿದೆ.

ದರ್ಶನ್ ಪರ ವಾದಿಸಿದ್ದ ಹಿರಿಯ ವಕೀಲ ಸಿವಿ ನಾಗೇಶ್ ಅವರು ತನಿಖೆಯಲ್ಲಿ ಹಲವು ಲೋಪದೋಷಗಳಿವೆ. ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿ ಮಾಡಿ, ಕತೆ ಹೆಣೆದಿದ್ದಾರೆ ಎಂದು ಟೀಕಿಸಿದ್ದರು. ಇದಕ್ಕೆ ಉತ್ತರಿಸಿದ ಪ್ರಸನ್ನ ಕುಮಾರ್ ಅವರು, ದರ್ಶನ್ ಅಂಡ್ ಗ್ಯಾಂಗ್ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿ ಹಾಗೂ ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಎಲ್ಲವನ್ನೂ ಉಲ್ಲೇಖಿಸಿ ಇದು ದರ್ಶನ್ ರಕ್ತಚರಿತ್ರೆ ಎಂದು ವಾದಿಸಿದರು.

ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಹಾಗೂ ಇತರ ಆರೋಪಿಗಳು ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದಾರೆ. ಅದಾಗಲೇ ನಾಲ್ಕು ಆರೋಪಿಗಳಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ನಾಳೆಗೆ ವಿಚಾರಣೆ ಮುಂದೂಡಲಾಗಿದೆಯಾದರೂ ನಾಳೆಯೂ ಸಹ ಜಾಮೀನು ಸಿಗುವುದು ಅನುಮಾನವೇ ಎನ್ನಲಾಗುತ್ತಿದೆ. ನಾಳೆಯೂ ಸಹ ಎಸ್​ಪಿಪಿ ಅವರ ವಾದ ಮುಂದುವರೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್