ಲೋಕಾಯುಕ್ತ  
ರಾಜ್ಯ

Lokayukta raid: ಹಲವು ಆರ್ ಟಿಒ ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ದಾಳಿ; ಶೋಧ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ಹಲವು ಆರ್​ಟಿಓ ಚೆಕ್ ಪೋಸ್ಟ್​​ಗಳ ಮೇಲೆ ದಾಳಿ ಮಾಡಿದ್ದಾರೆ. ಕೋಲಾರ, ಬೀದರ್, ವಿಜಯಪುರ ಮತ್ತು ಬಳ್ಳಾರಿ​​ ಜಿಲ್ಲೆಗಳಲ್ಲಿ ಆರ್​ಟಿಓ ಚೆಕ್​​ ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ತಾಡಿಗೋಳ ಕ್ರಾಸ್ ಬಳಿ ಇರುವ ಆರ್​ಟಿಓ ಚೆಕ್ ಪೋಸ್ಟ್ ಹಾಗೂ ಮುಳಬಾಗಿಲು ತಾಲೂಕು ನಂಗಲಿ ಆರ್​ಟಿಓ ಚೆಕ್ ಪೋಸ್ಟ್ ಮೇಲೆ ಕೋಲಾರ ಲೋಕಾಯುಕ್ತ ಎಸ್ಪಿ ಧನಂಜಯ ನೇತೃತ್ವದ ತಂಡ ದಾಳಿ ಮಾಡಿದೆ.

ಆರ್​ಟಿಓ ಚೆಕ್ ಪೋಸ್ಟ್​​ ಸಿಬ್ಬಂದಿ ವಿರುದ್ಧ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಸೂಮೋಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ದೂರು ಕೇಳಿಬಂದ ಆರ್​ಟಿಓ ಚೆಕ್​ಪೋಸ್ಟ್​​ಗಳ ಮೇಲೆ ಅಧಿಕಾರಿಗಳು ಇಂದು ಬೆಳ್ಳಂ ಬೆಳಗ್ಗೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡೂ ಚೆಕ್ ಪೋಸ್ಟ್​​ಗಳಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಹಣ ಪತ್ತೆಯಾಗಿದೆ.

ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿರುವ ಆರ್​ಟಿಓ ಚೆಕ್ ಪೋಸ್ಟ್​​ನಲ್ಲಿನ ಸಿಬ್ಬಂದಿ ವಿರುದ್ಧ ಲಂಚ ಪಡೆದ ಆರೋಪ ಕೇಳಿಬಂದಿತ್ತು. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಬೀದರ್ ಹಾಗೂ ಕಲಬುರಗಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಬಿ.ಕೆ. ಉಮೇಶ್, ಕಲಬುರಗಿ ಲೋಕಾಯುಕ್ತ ಡಿವೈಎಸ್​ಪಿ ಗೀತಾ ಬೀದರ್ ಮತ್ತು ಡಿವೈಎಸ್​ಪಿ ಹಣುಮಂತರಾಯ ನೇತೃತ್ವದ 4 ತಂಡದಿಂದ ಪರಿಶೀಲನೆ ನಡೆಯುತ್ತಿದೆ.

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿ ಇರುವ ಆರ್​ಟಿಓ ಚೆಕ್ ​ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲೇಶ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದೆ. ಬಳ್ಳಾರಿ ತಾಲೂಕಿನ ಪಿಡಿ‌ ಹಳ್ಳಿ ಸಮೀಪದ ಆರ್​ಟಿಓ ಚೆಕ್‌ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ದಾಳಿ ಮಾಡಿದೆ. ಅಧಿಕಾರಿಗಳು ಚೆಕ್ ಪೋಸ್ಟ್​​ನಲ್ಲಿದ್ದ ಹಣವನ್ನು ವಶಪಡಿಸಿಕೊಂಡಿದ್ದು, ಶೋಧ ಕಾರ್ಯ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್