ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ: ಎ1 ಆರೋಪಿ ಆಯಿಷಾ ಬಂಧನ
ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಹೆಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.
ಮಂಗಳೂರಿನ ಕುಳೂರಿನ ಫಲ್ಗುಣಿ ನದಿಗೆ ಹಾರಿ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸೋದರ ಉದ್ಯಮಿ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಆಯಿಷಾ ಅಲಿಯಾಸ್ ರೆಹಮತ್, ಎ5 ಆರೋಪಿ ಶೊಹೇಬ್ ಮತ್ತು ಸಿರಾಜ್ ಎಂಬುವವರನ್ನು ಕಲ್ಲಡ್ಕ ಬಳಿ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಮ್ತಾಜ್ ಅಲಿ ಆತ್ಮಹತ್ಯೆ ಬೆನ್ನಲ್ಲೇ ಕೇರಳಕ್ಕೆ ಪರಾರಿಯಾಗಿದ್ದ ಆಯಿಷಾ ಹಾಗೂ ಆಕೆಯ ಪತಿ ಶೊಹೇಬ್ ಹೆಡೆಮುರಿ ಕಟ್ಟಿರುವ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಪ್ರಕರಣದ ಮಾಸ್ಟರ್ಮೈಂಡ್ ಆಗಿರುವ ಎ2 ಆರೋಪಿ ಅಬ್ದುಲ್ ಸತ್ತಾರ್ಗಾಗಿ ಶೋಧ ನಡೆದಿದೆ.
ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಳ್ಳಲು ಹನಿಟ್ರ್ಯಾಪ್ ಹಾಗೂ ಬ್ಲ್ಯಾಕ್ ಮೇಲ್ ಕಾರಣ ಎಂದು ಅಲಿ ಕುಟುಂಬಸ್ಥರು ಆರೋಪಿಸಿದ್ದರು. ಪ್ರಕರಣ ಸಂಬಂಧ ಈಗಾಗಲೇ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮುಮ್ತಾಜ್ ಅಲಿಗೆ ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಬೇಡಿಕೆ ಇಡಲಾಗಿತ್ತು. ಮಹಿಳೆಯನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಲಾಗಿದೆ ಎಂದು ರೆಹಮತ್, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತರ್ ಮತ್ತು ಮುಮ್ತಾಜ್ ಕಾರು ಚಾಲಕ ಸಿರಾಜ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಮಹಿಳೆ ಮೂಲಕ ಬ್ಲ್ಯಾಕ್ ಮೇಲ್ ಮಾಡಿ 50 ಲಕ್ಷ ರೂಪಾಯಿಗಿಂತ ಅಧಿಕ ಹಣಕಾಸು ವಸೂಲಿ ಮಾಡಿದ್ದಾರೆ. ಇನ್ನಷ್ಟು ಹಣ ನೀಡಲು ಒಪ್ಪದೆ ಹೋದಾಗ ಆರೋಪಿಗಳು ಮುಮ್ತಾಜ್ ಅಲಿ ಮೇಲೆ ಹಲ್ಲೆ ಮಾಡಿದ್ದರು ಎಂದು ದೂರಿನಲ್ಲಿ ಉಲ್ಲೇಖ ಮಾಡಿದ್ದರು.