ಬಿಬಿಎಂಪಿ ಕಚೇರಿ(ಸಂಗ್ರಹ ಚಿತ್ರ) 
ರಾಜ್ಯ

ಕೋರಮಂಗಲ ಘಟಕದಲ್ಲಿ 20,757 ಟನ್ ತ್ಯಾಜ್ಯ ಸಂಸ್ಕರಣೆ

ಮಾರ್ಚ್‌ನಿಂದ, ಪ್ರತಿದಿನ 160 ಟನ್ ತ್ಯಾಜ್ಯವನ್ನು ಸಂಸ್ಕರಿಸುವ ಘಟಕವು ಇಲ್ಲಿಯವರೆಗೆ 20,757.52 ಟನ್ ತ್ಯಾಜ್ಯವನ್ನು ಸಂಸ್ಕರಿಸಿದೆ.

ಬೆಂಗಳೂರು: ಕೋರಮಂಗಲದಲ್ಲಿ ನಿರ್ಮಿಸಲಾಗಿರುವ ದ್ವಿತೀಯ ಹಂತದ ಘನತ್ಯಾಜ್ಯ ವರ್ಗಾವಣೆ ಹಾಗೂ ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಘಟಕದಿಂದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಕಾರ್ಯವು ಯಶಸ್ವಿಯಾಗಿ ನಡೆಯುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೇಳಿದೆ.

ಮಾರ್ಚ್‌ನಿಂದ, ಪ್ರತಿದಿನ 160 ಟನ್ ತ್ಯಾಜ್ಯವನ್ನು ಸಂಸ್ಕರಿಸುವ ಘಟಕವು ಇಲ್ಲಿಯವರೆಗೆ 20,757.52 ಟನ್ ತ್ಯಾಜ್ಯವನ್ನು ಸಂಸ್ಕರಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಲಿಮಿಟೆಡ್ (ಬಿಎಸ್‌ಡಬ್ಲ್ಯೂಎಂಎಲ್) ಇಂಜಿನಿಯರ್‌ಗಳು ತಿಳಿಸಿದ್ದಾರೆ. ನಗರದ ಸೌಂದರ್ಯ ಹೆಚ್ಚಿಸಲು ಮತ್ತು ಬೆಂಗಳೂರನ್ನು ಸ್ವಚ್ಛ ಮತ್ತು ಸುಂದರ ನಗರವನ್ನಾಗಿ ಮಾಡಲು ನಿಗಮ ಮತ್ತು ಬಿಎಸ್‌ಡಬ್ಲ್ಯುಎಂಎಲ್‌ನಿಂದ ವಿವಿಧ ಯೋಜನೆಗಳನ್ನು ರೂಪಿಸಿದೆ ಎಂದು ಅವರು ಹೇಳಿದರು.

ದ್ವಿತೀಯ ಘನತ್ಯಾಜ್ಯ ವರ್ಗಾವಣೆ ಮತ್ತು ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಯ ಮೊದಲ ಘಟಕವನ್ನು ಈಜಿಪುರ ವಾರ್ಡ್‌ನಲ್ಲಿ ಸ್ಥಾಪಿಸಲಾಯಿತು. ಆ ಘಟಕವು ಬಿಟಿಎಂ ಲೇಔಟ್ ವಿಭಾಗದ 3 ವಾರ್ಡ್‌ಗಳು, ಶಾಂತಿನಗರ ವಿಭಾಗದ ಮೂರು ವಾರ್ಡ್‌ಗಳು ಮತ್ತು ಕೆ-100 ವ್ಯಾಲಿಯಿಂದ ಪ್ರತಿದಿನ ಸುಮಾರು 150-160 ಟನ್‌ಗಳಷ್ಟು ಘನತ್ಯಾಜ್ಯವನ್ನು ಪಡೆಯುತ್ತದೆ. ಕೋರಮಂಗಲದ ಈ ಘಟಕ ಈಗಾಗಲೇ ಯಶಸ್ವಿಯಾಗಿ ನಡೆಯುತ್ತಿದ್ದು, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿನ್ನಿಪೇಟೆಯಲ್ಲಿ ನಿರ್ಮಿಸಿರುವ ಘಟಕ ಉದ್ಘಾಟನೆಗೆ ಸಿದ್ಧವಾಗಿದೆ. ಸರ್ವಜ್ಞನಗರದಲ್ಲಿ ಕಾಮಗಾರಿ ನಡೆಸಲು ಕ್ರಮಕೈಗೊಳ್ಳಲಾಗುತ್ತಿದೆ. ನಗರದ ಇತರೆ ವಿಧಾನಸಭಾ ಕ್ಷೇತ್ರಗಳಲ್ಲಿ ನಾಲ್ಕು ಹೊಸ ಘಟಕಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಮೂರು ಘಟಕಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳನ್ನು ಸರ್ಕಾರದ ಅನುಮೋದನೆಗಾಗಿ ಕಳುಹಿಸಲಾಗಿದೆ, ಆದರೆ ಒಂದು ಪ್ರಸ್ತಾವನೆಯು ನಿರ್ಮಾಣಕ್ಕೆ ಅನುಮೋದನೆಯನ್ನು ಪಡೆಯುತ್ತಿದೆ ಎಂದು ಬಿಡಬ್ಲ್ಯುಎಸ್‌ಎಂಎಲ್ ಎಂಜಿನಿಯರ್ ತಿಳಿಸಿದ್ದಾರೆ. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಒಂದೊಂದು "ದ್ವಿತೀಯ ಮಟ್ಟದ ಘನತ್ಯಾಜ್ಯ ವರ್ಗಾವಣೆ ಮತ್ತು ಸ್ವಯಂಚಾಲಿತ ತ್ಯಾಜ್ಯ ವಿಂಗಡಣೆ ಘಟಕ ಸ್ಥಾಪಿಸುವ ಯೋಜನೆ ಇದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT