ಪ್ರಾತಿನಿಧಿಕ ಚಿತ್ರ 
ರಾಜ್ಯ

ಹಳಸಿದ ಆಹಾರ ಸೇವಿಸಿ ಬಾಲಕ ಸಾವು ಪ್ರಕರಣ: ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲು

ಧೀರಜ್ ತಂದೆ ಬಾಲರಾಜ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಗಳೂರು: ಹಳಸಿದ ಆಹಾರ ಸೇವಿಸಿ 5 ವರ್ಷದ ಬಾಲಕ ಮೃತಪಟ್ಟ ಪ್ರಕರಣಕ್ಕೆ ಸಂಬಂದಿಸಿದಂತೆ ಕೆಪಿ ಅಗ್ರಹಾರ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ಆಹಾರ ಸೇವಿಸಿದ ಬಾಲಕನ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಚೇತರಿಸಿಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಮೂವರಿಗೂ ಪದೇ ಪದೇ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದೆ. ಮೂವರು ಆಸ್ಪತ್ರೆಗೆ ದಾಖಲಾದ ಬಳಿಕ ವೈದ್ಯರು ಬಾಲಕ ಧೀರಜ್ (5) ಮೃತಟ್ಟಿರುವುದಾಗಿ ತಿಳಿಸಿದ್ದಾರೆ.

ಧೀರಜ್ ತಂದೆ ಬಾಲರಾಜ್ ಅವರ ದೂರಿನ ಆಧಾರದ ಮೇಲೆ ಪೊಲೀಸರು ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೀಗ ಪೊಲೀಸರು ಬಾಲರಾಜ್ ಅವರ ಮನೆಯಿಂದ ಆಹಾರದ ಮಾದರಿಗಳನ್ನು ಮತ್ತು ಕುಟುಂಬವು ಅಡುಗೆಗೆ ಬಳಸಿದ ಪದಾರ್ಥಗಳನ್ನು ಸಂಗ್ರಹಿಸಿದ್ದು, ಅವುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ರವಾನಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದ ನಂತರ ತನಿಖೆ ಮುಂದುವರಿಯಲಿದೆ ಪೋಷಕರು ತಿಳಿಸಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT