ಕಲಬುರಗಿ: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ, ಮೂವರು ಯುವಕರ ದಾರುಣ ಸಾವು
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎಂಬುವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಘಟನೆ ನಡೆದಿದೆ.
ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿ ಮೂವರು ಸವಾರರು ಸಾವಿಗೀಡಾದ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ ರಾತ್ರಿ ಸಂಭವಿಸಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಎಂಬುವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿರುವಾಗ ಘಟನೆ ನಡೆದಿದೆ. ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗಳಿಂದ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.