ಬೆಂಗಳೂರು: ಮದುವೆ ನೆಪದಲ್ಲಿ ಅತ್ಯಾಚಾರ; ಯುವಕನ ಬಂಧನ
ಛತ್ತೀಸ್ ಗಢ ಮೂಲದ ಸಂತ್ರಸ್ತೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಯಾಗಿದ್ದು, ರಫೀಕ್ ಅವರೊಂದಿಗೆ ನೇರ ಸಂಬಂಧ ಹೊಂದಿದ್ದರು. 2021 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಪರಿಚಿತರಾಗಿದ್ದು, ಬಳಿಕ ಫೋನ್‌ನಲ್ಲಿ ಚಾಟಿಂಗ್, ಮಾತುಕತೆ ಮೂಲಕ ಪ್ರೀತಿಸುತ್ತಿದ್ದರು.
ಬೆಂಗಳೂರು: ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 28 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಮತ್ತು ಆತನ ಪೋಷಕರ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಬಿಲಾಲ್ ರಫೀಕ್ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಛತ್ತೀಸ್ ಗಢ ಮೂಲದ ಸಂತ್ರಸ್ತೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಯಾಗಿದ್ದು, ರಫೀಕ್ ಅವರೊಂದಿಗೆ ನೇರ ಸಂಬಂಧ ಹೊಂದಿದ್ದರು. 2021 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಪರಿಚಿತರಾಗಿದ್ದು, ಬಳಿಕ ಫೋನ್‌ನಲ್ಲಿ ಚಾಟಿಂಗ್, ಮಾತುಕತೆ ಮೂಲಕ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿದ ರಫೀಕ್ ಎರಡು ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ ಎನ್ನಲಾಗಿದೆ.
ಎರಡೂ ಬಾರಿ ಆಕೆ ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ಆರೋಪಿ ಒತ್ತಾಯಿಸಿದ್ದಾನೆ. 2024 ರಲ್ಲಿ ಆಕೆ ಮೂರನೇ ಬಾರಿಗೆ ಗರ್ಭಿಣಿಯಾದಾಗ ಸಂತ್ರಸ್ತೆ ಆತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದು, ಅವರ ಎರಡೂ ಕುಟುಂಬಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಆಕೆ ಕೆಳ ಸಮುದಾಯಕ್ಕೆ ಸೇರಿದವಳು ಎಂದು ಆರೋಪಿಸಿ ಆಕೆಯನ್ನು ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಇಬ್ಬರೂ ಲಿವ್-ಇನ್ ಸಂಬಂಧದಲ್ಲಿದ್ದರು, ಆದರೆ ವಿವಾದದ ನಂತರ ಆರೋಪಿ ಆಕೆಯನ್ನು ಬಿಟ್ಟು ಕೇರಳಕ್ಕೆ ಪರಾರಿಯಾಗಿದ್ದ. ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಅತ್ಯಾಚಾರ ಮತ್ತು ಎಸ್‌ಸಿ ,ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.