ಎಸ್‌ಟಿ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿರುವ ಸಿಎಂ. 
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನ: ನಿಯೋಗದಿಂದ ಸಿಎಂ ಭೇಟಿ, ಮನವಿ

ಇನ್ನಾದರೂ ಸರ್ಕಾರ ಎಸ್ಟಿ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅನುದಾನ ಬಿಡುಗಡೆ ಮಾಡಿ, ಫಲಾನುಭವಿಗಳಿಗೆ ಯೋಜನೆ ಅನುಷ್ಠಾನಗೊಳಿಸುವಂತೆ ಸಮಾಜದ ಮುಖಂಡರು ಸಿಎಂಗೆ ಮನವಿ ಮಾಡಿದರು.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಿಯಮಬಾಹಿರ ವರ್ಗಾವಣೆಯಾಗಿದ್ದ ಹಣವನ್ನು ತಕ್ಷಣವೇ ನಿಗಮಕ್ಕೆ ಬಿಡುಗಡೆ ಮಾಡಿ ಜನಾಂಗದ ಫಲಾನುಭವಿಗಳಿಗೆ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಎಸ್‌ಟಿ ಸಮುದಾಯದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಡಾ.ಪ್ರಸನ್ನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಶಾಸಕರಾದ ಬಿ.ಎಂ.ನಾಗರಾಜ, ಟಿ.ರಘುಮೂರ್ತಿ, ಬಸನಗೌಡ ತುರವಿಹಾಳ, ರಾಜಾ ವೇಣುಗೋಪಾಲ ನಾಯಕ, ಡಾ.ಶ್ರೀನಿವಾಸ, ಲೋಕಸೇವಾ ಆಯೋಗದ ಮಾಜಿ ಸದಸ್ಯ ಜಿ.ಟಿ.ಚಂದ್ರಶೇಖರಪ್ಪ ಮತ್ತಿತರ ಮುಖಂಡರನ್ನೊಳಗೊಂಡ ವಾಲ್ಮೀಕಿ ನಾಯಕ ಸಮಾಜದ ನಿಯೋಗದವರು ಬುಧವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳ ಭೇಟಿ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ 187.33 ಕೋಟಿ ರೂ.ಗಳ ಹಗರಣ ಕುರಿತು ಚರ್ಚೆ ನಡೆಸಿದರು.

ಇನ್ನಾದರೂ ಸರ್ಕಾರ ಎಸ್ಟಿ ಅಭಿವೃದ್ಧಿ ನಿಗಮಕ್ಕೆ ಕೂಡಲೇ ಅನುದಾನ ಬಿಡುಗಡೆ ಮಾಡಿ, ಫಲಾನುಭವಿಗಳಿಗೆ ಯೋಜನೆ ಅನುಷ್ಠಾನಗೊಳಿಸುವಂತೆ ಸಮಾಜದ ಮುಖಂಡರು ಸಿಎಂಗೆ ಮನವಿ ಮಾಡಿದರು.

ಪಟ್ಟಭದ್ರ ಹಿತಾಸಕ್ತಿಗಳು ‘ತಳವರ’ ಸಮುದಾಯದವರೆಂದು ಸುಳ್ಳು ಹೇಳಿ ನಕಲಿ ಪರಿಶಿಷ್ಟ ಪಂಗಡ ಪ್ರಮಾಣಪತ್ರ ಪಡೆಯುತ್ತಿರುವುದನ್ನು ತಡೆಯಲು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಈ ಮನವಿಗೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಕೂಡಲೇ ಸಭೆ ಕರೆದು ಎಸ್‌ಟಿ ಸಮುದಾಯದ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆ ನೀಡಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT