ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಎಸ್‌ಸಿ ಒಳ ಮೀಸಲಾತಿ ಜಾರಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಹೈಕಮಾಂಡ್ ಭೇಟಿಗೆ ನಿರ್ಧಾರ

ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಬೆಂಗಳೂರು: ಪರಿಶಿಷ್ಟ ಜಾತಿಗೆ (ಎಸ್‌ಸಿ) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗಳು ನಡೆಸಿದ್ದು, ಸಭೆಯಲ್ಲಿ ಹೈಕಮಾಂಡ್ ಭೇಟಿಗೆ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಸಚಿವ ಸಂಪುಟ ಸಭೆಯಲ್ಲಿ ದಲಿತ ಸಮುದಾಯದ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ಎಚ್.ಮುನಿಯಪ್ಪ, ಶಿವರಾಜ್ ತಂಗಡಗಿ ಅವರು ಈ ವಿಷಯ ಪ್ರಸ್ತಾಪಿಸಿದರು. ಆಡಳಿತ ಪಕ್ಷವನ್ನು ಮೂಲೆಗುಂಪು ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಎಸ್‌ಸಿ ವರ್ಗದ ಎಲ್ಲಾ ಸಮುದಾಯಗಳ ಹಿತಾಸಕ್ತಿಗಳನ್ನು ಪರಿಗಣಿಸಬೇಕಾಗಿರುವುದರಿಂದ ವಿಷಯ ಸೂಕ್ಷ್ಮವಾಗಿದೆ. ಈ ಮೀಸಲಾತಿಯು ಸಮುದಾಯಕ್ಕೆ ಸಹಾಯ ಮಾಡುತ್ತದೆ ಎಂದು ಮನವರಿಕೆ ಮಾಡುವುದು ಅಗತ್ಯವಿದೆ ಎಂದು ತಿಳಿಸಿದರು ಎಂದು ಮೂಲಗಳು ತಿಳಿಸಿವೆ.

ಅಕ್ಟೋಬರ್ 21 ರಂದು ಎಸ್‌ಸಿ ವರ್ಗದ ವಿವಿಧ ಸಮುದಾಯಗಳಿಗೆ ಸೇರಿದ ಕಾಂಗ್ರೆಸ್ ಶಾಸಕರು ಸಭೆ ನಡೆಸಿ, ಒಳಮೀಸಲಾತಿ ಕುರಿತು ಅಂತಿಮ ನಿರ್ಧಾರಕ್ಕೆ ಬರಲಿದ್ದು, ಬಳಿಕ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್ ಯುದ್ಧದ ಎಫೆಕ್ಟ್: ಅಮೆರಿಕದ ಶಸ್ತ್ರಾಸ್ತ್ರ ದಾಸ್ತಾನು ಖಾಲಿ? ರಕ್ಷಣಾ ಕಂಪನಿಗಳಿಗೆ ಶಸ್ತ್ರಾಸ್ತ್ರ ಉತ್ಪಾದನೆ ಹೆಚ್ಚಿಸಲು ಪೆಂಟಗನ್ ಸೂಚನೆ

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!