ರಾಜ್ಯ

ಮೈಸೂರು-ದರ್ಭಂಗಾ ಬಾಗ್ಮತಿ ಎಕ್ಸ್‌ಪ್ರೆಸ್ ಅಪಘಾತ: ಎರಡು ರೈಲುಗಳ ಮಾರ್ಗ ಬದಲಾವಣೆ

ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದ್ವು ಎಂದು ವಿ.ಸೋಮಣ್ಣ ತಿಳಿಸಿದರು.

ಬೆಂಗಳೂರು: ಕಳೆದ ರಾತ್ರಿ ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಕವರಪೇಟ್ಟೈನಲ್ಲಿ ಸಂಭವಿಸಿದ ರೈಲು ಅಪಘಾತ ಬಗ್ಗೆ ರೈಲ್ವೆ ಇಲಾಖೆ ರಾಜ್ಯ ಸಚಿವ ಸೋಮಣ್ಣ ಪ್ರತಿಕ್ರಿಯೆ ನೀಡಿ, ಹೆಚ್ಚಿನ ಅನಾಹುತ ತಪ್ಪಿದೆ. ದೇವರ ದಯೆಯಿಂದ ಅಪಘಾತದಲ್ಲಿ ಹೆಚ್ಚಿನ ಸಾವು ನೋವು ತಪ್ಪಿದೆ ಎಂದಿದ್ದಾರೆ.

ರೈಲ್ವೆ ಅಪಘಾತದಲ್ಲಿ 19 ಜನರು ಗಾಯಗೊಂಡಿದ್ದಾರೆ. ರೈಲು ಅಪಘಾತದಲ್ಲಿ ಇಬ್ಬರಿಗೆ ಗಂಭೀರವಾಗಿ ಗಾಯವಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 13 ಬೋಗಿಗಳು ಹಳಿ ತಪ್ಪಿದ್ವು ಎಂದು ವಿ.ಸೋಮಣ್ಣ ತಿಳಿಸಿದರು. ತುಂಬಾ ಒಳ್ಳೇ ದಿನ, ಅಪಘಾತದಲ್ಲಿ ದೊಡ್ಡ ಅನಾಹುತವಾಗಿಲ್ಲ. ಎಲ್ಲ ಪ್ರಯಾಣಿಕರನ್ನೂ ಮೆಮು ಟ್ರೈನ್ ಮೂಲಕ ಶಿಫ್ಟ್ ಮಾಡಲಾಗಿದೆ. ಪ್ರಯಾಣಿಕರಿಗೆ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ. ಇಂದು ಅವರು ಎಲ್ಲೆಲ್ಲಿಗೆ ತಲುಪಬೇಕು ಅಲ್ಲಿಗೆ ವ್ಯವಸ್ಥೆ ಮಾಡಲಾಗುವುದು. ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಯಾವ ಕಾರಣಕ್ಕೆ ಅಪಘಾತವಾಯಿತು ಎಂದು ತನಿಖೆ ಆಗಬೇಕಿದೆ ಎಂದರು.

ಇನ್ನು ನಿನ್ನೆಯೇ ಸ್ಥಳೀಯರು ರೈಲಿನಲ್ಲಿದ್ದವರನ್ನ ರಕ್ಷಿಸಿದ್ದಾರೆ. ತಮಿಳುನಾಡು ಪೊಲೀಸರು, ರೈಲ್ವೆ ಅಧಿಕಾರಿಗಳು, NDRF ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಮಾಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಆದರೂ, ಶ್ವಾನ ದಳದಿಂದ ಯಾರಾದರೂ ನಾಪತ್ತೆಯಾಗಿದ್ದಾರಾ ಎಂದು ಹುಡುಕಾಟ ನಡೆದಿದೆ. ರೈಲ್ವೆ ಇಲಾಖೆ ಸಹಾಯವಾಣಿ ಕೂಡ ಮುಕ್ತ ಸಹಾಯವಾಣಿ ತೆರೆದಿದೆ. ಪ್ರಯಾಣಿಕರ ಬಗ್ಗೆ ಮಾಹಿತಿ ನೀಡುತ್ತಿದೆ. ಬದುಕುಳಿದ ಪ್ರಯಾಣಿಕರು ಘಟನೆಯ ಬಗ್ಗೆ ವಿವರಣೆ ನೀಡಿದ್ದಾರೆ.

8 ರೈಲುಗಳ ಸಂಚಾರ ಬದಲು.. 2 ರೈಲು ಸಂಚಾರ ರದ್ದು

ರೈಲ್ವೆ ಒಟ್ಟು 8 ರೈಲುಗಳ ಸಂಚಾರ ಮಾರ್ಗವನ್ನ ಬದಲಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಚೆನ್ನೈ-ವಿಜಯವಾಡ, ವಿಜಯವಾಡ-ಚೆನ್ನೈ 2 ರೈಲುಗಳ ಸಂಚಾರವನ್ನ ರದ್ದು ಮಾಡಿದೆ. ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಉಪ ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ಆಸ್ಪತ್ರೆಗಳಿಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ: ಶನಿವಾರ ಬೆಳಗ್ಗೆ 8.50ಕ್ಕೆ ಹೊರಡುವ ಎಸ್​ಎಂವಿಟಿ ಬೆಂಗಳೂರು-ಕಾಮಾಕ್ಯ (ರೈಲು ಸಂಖ್ಯೆ: 12551) ಎಸಿ ಎಕ್ಸಪ್ರೆಸ್​ ರೈಲು ಧರ್ಮಾವರಂ, ವಿಜಯವಾಡ ಮಾರ್ಗವಾಗಿ ಸಂಚರಿಸಲಿದೆ. ಇದರಿಂದಾಗಿ ಜೋಳರಪೆಟ್ಟೈ, ಕಟ್ಟಾಡಿ, ಪೆರಂಬೂರು ಹಾಗೂ ಗೂಡೂರು ನಿಲ್ದಾಣಗಳು ಬಿಟ್ಟು ಹೋಗಲಿವೆ.

ಬೆಳಗ್ಗೆ 9.15ಕ್ಕೆ ಹೊರಡುವ ಎಸ್​​ಎಂವಿಟಿ ಬೆಂಗಳೂರು-ದಾನಪುರ ಸಂಗಮಿತ್ರ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12295) ರೈಲು, ಧರ್ಮಾವರಂ, ಕಾಜೀಪೇಟ್​ ಮಾರ್ಗವಾಗಿ ಹೋಗಲಿದೆ. ಕೆಆರ್​ಪುರ, ಬಂಗಾರಪೇಟೆ, ಕುಪ್ಪಂ, ಜೋಳರವಟ್ಟೈ, ಕಟ್ಟಾಡಿ, ಆರಕೋಣಂ, ಪೆರಂಬೂರ್​, ಗೂಡೂರ್​, ನೆಲ್ಲೂರು, ಒಂಗೋಲ್​, ವಿಜಯವಾಡ ಹಾಗೂ ವಾರಂಗಲ್​ ನಿಲ್ದಾಣಗಳು ತಪ್ಪಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT