ಡಿ ಕೆ ಶಿವಕುಮಾರ್  
ರಾಜ್ಯ

ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ನೀತಿ ಖಂಡಿಸಿ ಪ್ರತಿಭಟನೆ: ಡಿ ಕೆ ಶಿವಕುಮಾರ್

ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ತಾರತಮ್ಯವಾಗಿದೆ. ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ಮಾಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ ತಾರತಮ್ಯವಾಗುತ್ತಿದೆ. ನಮ್ಮ ತೆರಿಗೆ ಹಣ ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ಕೊಡುತ್ತಿದ್ದಾರೆ. ಆಂಧ್ರಕ್ಕಿಂತ‌ಲೂ ಕಡಿಮೆ ಹಣ ನಮಗೆ ನೀಡಿದ್ದಾರೆ. ಅವರಿಗಿಂತ ನಾವು ಕೀಳಾ ಹಾಗಾದರೆ ಎಂದು ಕೇಳಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಕೇಂದ್ರ ಸರ್ಕಾರದಲ್ಲಿ ಐವರು ಸಚಿವರು ನಮ್ಮ ರಾಜ್ಯದಿಂದ ಇದ್ದಾರೆ. ನಮ್ಮಲ್ಲೇ ಇದ್ದುಕೊಂಡು ಈಗ ನಮಗೆ ಅನ್ಯಾಯ ಮಾಡುತ್ತಿದ್ದಾರೆ. ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು.

ಜಾಹೀರಾತು ವಿವಾದ: ರಾಜ್ಯ ಸರ್ಕಾರದ ಜಾಹೀರಾತಿಗೆ ವಿಪಕ್ಷಗಳು ಆಕ್ಷೇಪ ಎತ್ತಿರುವ ವಿಚಾರವಾಗಿ ಮಾತನಾಡಿದ ಅವರು, ನಮಗಿರುವ ಮಾಹಿತಿಯನ್ನು ಜಾಹಿರಾತು ರೂಪದಲ್ಲಿ ನೀಡಿದ್ದೇವೆ. ನಾವು ಮುನ್ನಡೆಯುತ್ತಿರುವ ದಾರಿಯ ಆಧಾರದ ಮೇಲೆ ಮತ್ತು ನಮ್ಮ ಭಾವನೆಗಳ ಮೇಲೆ ಜಾಹೀರಾತು ನೀಡಿದ್ದೇವೆ. ನಮ್ಮ ಸರ್ಕಾರದ ಸಾಧನೆ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಮಾತನಾಡುತ್ತೇವೆ ಎಂದರು.

5 ನೇ ಹಂತದ ಕುಡಿಯುವ ಯೋಜನೆಗೆ ಚಾಲನೆ: ಈ ವರ್ಷ ದಸರಾ ಅದ್ಧೂರಿಯಾಗಿ ಆಚರಿಸುತ್ತಿದ್ದೇವೆ. ತಾಯಿ ಚಾಮುಂಡೇಶ್ವರಿ ಮಳೆ-ಬೆಳೆ ಕೊಟ್ಟಿದ್ದಾಳೆ. ತಮಿಳುನಾಡಿನ ಹೋರಾಟ ಕಡಿಮೆಯಾಗಿದೆ. ಎಲ್ಲಾ ಅಣೆಕಟ್ಟೆಗಳು ತುಂಬಿವೆ. ಕಟ್​​ ಆಗಿದ್ದ ತುಂಗಭದ್ರಾ ಡ್ಯಾಂನ ಗೇಟ್​ ನ್ನು ಆರು ದಿನದಲ್ಲೇ ಕೂರಿಸಿ ನೀರು ಪೋಲಾಗುತ್ತಿದ್ದದ್ದನ್ನು ನಿಲ್ಲಿಸಿದ್ದೇವೆ. ಅ.16 ಬೆಂಗಳೂರಿಗೆ ವಿಶೇಷ ದಿನವಾಗಿದೆ. ಐದನೇ ಹಂತದ ಕುಡಿಯುವ ಯೋಜನೆ ಚಾಲನೆ ಸಿಗಲಿದೆ. ಇದರಿಂದ 50 ಲಕ್ಷ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ