ಧಾರವಾಡದಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಭಾರೀ ಅವಾಂತರಗಳಿಗೆ ಕಾರಣವಾಗಿದೆ.
ಅಳ್ನಾವರ ತಾಲೂಕಿನ ಬೆಣಚಿ ಮತ್ತು ಬಳಗೇರಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಕೊಚ್ಚಿ ಹೋಗಿದ್ದು, ಎರಡು ಗ್ರಾಮಗಳು ಪ್ರತ್ಯೇಕಗೊಂಡಿವೆ.
ಪರ್ಯಾಯ ಮಾರ್ಗಗಳಿಲ್ಲದ ಕಾರಣ ನಿವಾಸಿಗಳು ಹಗ್ಗ ಬಳಸಿ ಪ್ರಾಣವನ್ನು ಪಣಕ್ಕಿಟ್ಟಂತೆ ದಿನನಿತ್ಯದ ಅಗತ್ಯ ಕೆಲಸಗಳಿಗೆ ನದಿ ದಾಟಿಕೊಂಡು ಹೋಗಬೇಕಾದ ಪರಿಸ್ಥಿತಿ ಬಂದಿದೆ. ಕೂಡಲೇ ನೂತನ ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲೆಯ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
2019ರಲ್ಲಿ ಇದೇ ರೀತಿ ಮಳೆಯಾಗಿದ್ದಾಗ ಸೇತುವೆಯು ಭಾಗಶಃ ಹಾನಿಗೊಳಗಾಗಿತ್ತು.