ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಗೂಡ್ಸ್ ವಾಹನ ಚಕ್ರ ಹರಿದು 5 ವರ್ಷದ ಮಗು ಸಾವು

ದಸರಾ ರಜೆ ಹಿನ್ನೆಲೆಯಲ್ಲಿ ಮೃತ ಬಾಲಕ ಅಜ್ಜಿ ಮನೆಗೆ ಹೋಗಿದ್ದ. ಸ್ನೇಹಿತರೊಂದಿಗೆ ಆಟವಾಡಿದ ಬಳಿಕ ಸಂಜೆ ಮನೆಗೆ ವಾಪಸ್ಸಾಗುತ್ತಿದ್ದ. ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್'ನ ಹ್ಯಾಂಡಲ್ ಬಾರ್ ಭುಜಕ್ಕೆ ತಾಕಿದ್ದು, ಆಯತಪ್ಪಿ ರಸ್ತೆಗ ಬಿದ್ದಿದ್ದಾನೆ.

ಬೆಂಗಳೂರು: ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಅ.11 ಸಂಜೆ 6 ಗಂಟೆ ಸುಮಾರಿಗೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ರಸ್ತೆಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಬಿಹೆಚ್ಇಎಲ್'ನ ಬಾಪೂಜಿನಗರದ ನಿವಾಸಿ ತನ್ವೀರ್ ಪಾಷಾ ಎಂಬುವವರ ಪುತ್ರ ತಾಹೀರ್ ಪಾಷಾ (5) ಮೃತ ದುರ್ದೈವಿ.

ದಸರಾ ರಜೆ ಹಿನ್ನೆಲೆಯಲ್ಲಿ ಮೃತ ಬಾಲಕ ಅಜ್ಜಿ ಮನೆಗೆ ಹೋಗಿದ್ದ. ಸ್ನೇಹಿತರೊಂದಿಗೆ ಆಟವಾಡಿದ ಬಳಿಕ ಸಂಜೆ ಮನೆಗೆ ವಾಪಸ್ಸಾಗುತ್ತಿದ್ದ. ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್'ನ ಹ್ಯಾಂಡಲ್ ಬಾರ್ ಭುಜಕ್ಕೆ ತಾಕಿದ್ದು, ಆಯತಪ್ಪಿ ರಸ್ತೆಗ ಬಿದ್ದಿದ್ದಾನೆ. ಇದೇ ವೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ವಾಹನದ ಚಕ್ರಗಳು ಬಾಲಕನ ತಲೆ ಮೇಲೆ ಹರಿದಿದೆ.

ಕೂಡಲೇ ಸ್ಥಳೀಯರು ಹಾಗೂ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆಯ ವಿಡೀಯೋ ಸಮೀಪದ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ, ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಚಾಲಕ ಪ್ರಶಾಂತ್ ನನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!