ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಚಡ್ಡಿ ಮೇಲೆ ಪಂಚೆ ಧರಿಸದ್ದಕ್ಕೆ ತಂದೆಯನ್ನೇ ಹತ್ಯೆಗೈದ ಮಗ!

ಕೇರಳ ಮೂಲದ ವೇಲಾಯುದನ್ (76) ಹತ್ಯೆಯಾದ ದುರ್ದೈವಿ. ವಿನೋದ್ ಕುಮಾರ್ (42) ಆರೋಪಿ. ವೇಲಾಯುಧನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಬೆಂಗಳೂರು: ಚಡ್ಡಿ ಮೇಲೆ ಪಂಚೆ ಧರಸಿದ್ದಕ್ಕೆ ಕೆಂಡಾಮಂಡಲಗೊಂಡ ಪುತ್ರನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆಯೊಂದು ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ಶನಿವಾರ ನಡೆದಿದೆ.

ಕೇರಳ ಮೂಲದ ವೇಲಾಯುದನ್ (76) ಹತ್ಯೆಯಾದ ದುರ್ದೈವಿ. ವಿನೋದ್ ಕುಮಾರ್ (42) ಆರೋಪಿ. ವೇಲಾಯುಧನ್ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.

ಆರೋಪಿ ವಿನೋದ್ ಕುಮಾರ್ (42) ಖಾಸಗಿ ಸಂಸ್ಥೆಯ ಉದ್ಯೋಗಿಯಾಗಿದ್ದು, ಶನಿವಾರ ಬೆಳಗ್ಗೆ 11.30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಶುರುವಾಗಿದೆ.

ಆರೋಪಿ ತನ್ನ ತಂದೆಗೆ ಚಡ್ಡಿ ಧರಿಸಿ, ನಂತರ ಪಂಚೆ ಹಾಕಿಕೊಳ್ಳುವಂತೆ ತಿಳಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಸಮರ ಶುರುವಾಗಿದೆ. ಇದರಿಂದ ಕೆಂಡಾಮಂಡಲಗೊಂಡಿರುವ ವಿನೋದ್ ತಂದೆಗೆ ಥಳಿಸಿದ್ದು, ಗೋಡೆಗೆ ತಲೆಯನ್ನು ಗುದ್ದಿಸಿದ್ದಾನೆ. ಪರಿಣಾಮ ವೇನಾಯುಧನ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಳಿಕ ವಿನೋದ್ ಕುಮಾರ್ ಸ್ಥಳದಿಂದ ಪರಾರಿಯಾಗಿದ್ದು, ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಭಾನುವಾರ ಬೆಳಗ್ಗೆ ವಿನೋದ್‌ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?