ಪ್ರಮೋದಾ ದೇವಿ ಒಡೆಯರ್ 
ರಾಜ್ಯ

ಅಂಬಾರಿ ಹಸ್ತಾಂತರ ವಿಳಂಬ- ತಡವಾಗಿ ಪುಷ್ಟಾರ್ಚನೆ: ರಾಜಮಾತೆ ಪ್ರಮೋದಾ ದೇವಿ ಸ್ಪಷ್ಟನೆ

ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿ ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ‌ ಸ್ಥಳಾಂತರಿಸಲು ತೊಂದರೆ ಆಯಿತು.

ಮೈಸೂರು: ನಾಡಹಬ್ಬ ಮೈಸೂರು ದಸರಾಗೆ ವಿದ್ಯುಕ್ತವಾಗಿ ತೆರೆ ಬಿದ್ದಿದೆ. ಕಳೆದ 10 ದಿನಗಳಿಂದ ವರ್ಣರಂಜಿತವಾಗಿ ನಡೆದ ಮೈಸೂರು ದಸರಾ ಪಂಜಿನ ಕವಾಯತಿನ ಮೂಲಕ ಸಾಂಪ್ರದಾಯಿಕವಾಗಿ ಅಂತ್ಯವಾಗಿದೆ. ಆದರೆ ಈ ಮಧ್ಯೆ ಚಿನ್ನದ ಅಂಬಾರಿ‌ ಹಸ್ತಾಂತರ ಮಾಡುವುದು ತಡವಾಯಿತು ಎಂಬ ಆರೋಪ ಕೇಳಿಬಂದಿದೆ. ಇದೀಗ ಈ ವಿಚಾರಕ್ಕೆ ಸ್ವತಃ ಪ್ರಮೋದಾದೇವಿ ಒಡೆಯರ್ ಸ್ಪಷ್ಟನೆ ನೀಡಿದ್ದಾರೆ.

ಇದು ಬೇಜವಾಬ್ದಾರಿ ಹೇಳಿಕೆ ಎಂದು ನಾನು ಹೇಳಲು ಬಯಸುತ್ತೇನೆ. ಏಕೆಂದರೆ ಅಂಬಾರಿಯನ್ನು ಮಧ್ಯಾಹ್ನ 2 ಗಂಟೆಗೆ ಹಸ್ತಾಂತರಿಸಲಾಗಿದೆ. ಈ ವಿಷಯ ನಮಗೂ ಆತಂಕ ಉಂಟು ಮಾಡಿತ್ತು ಎಂದು ಹೇಳಿದ್ದಾರೆ. ಎಲ್ಲಾ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಲು ನಾವು ಪ್ರಯತ್ನಿಸಿದರೂ ಮತ್ತು ಅಂಬಾರಿ ಸಿದ್ಧವಾಗಿದ್ದರೂ ಸಂಬಂಧಿಸಿದ ಸಿಬ್ಬಂದಿಗಳು ಸರಿಯಾಗಿ ಜನಸಂದಣಿ ನಿರ್ವಹಣೆ ಮಾಡದ ಮತ್ತು ಕೆಲವು ಸರ್ಕಾರಿ ಕಾರುಗಳನ್ನು ಮಾರ್ಗ ಮಧ್ಯೆದಲ್ಲಿ ನಿಲ್ಲಿಸಿದ್ದರಿಂದ ಅಂಬಾರಿ‌ ಸ್ಥಳಾಂತರಿಸಲು ತೊಂದರೆ ಆಯಿತು.

ಅಂಬಾರಿ‌ ಹಸ್ತಾಂತರದ ಸಮಯದ ಬಗ್ಗೆ ತಪ್ಪು ತಿಳುವಳಿಕೆಯನ್ನು ಸ್ಪಷ್ಟಪಡಿಸುವ ನಿಟ್ಟಿನಲ್ಲಿ ನಾನು ಈ ಹೇಳಿಕೆಯನ್ನು ನೀಡಿದ್ದೇನೆ. ಸಂಬಂಧಪಟ್ಟ ಎಲ್ಲರಿಗೂ ಅನಗತ್ಯ ಆತಂಕವನ್ನು ತಪ್ಪಿಸುವ ಉದ್ದೇಶ ಹೊರತು ಬೇರೆ ಯಾವುದೇ ಉದ್ದೇಶದಿಂದಲ್ಲ. ಮುಂದೆ ಈ ರೀತಿಯ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!