ಸಾಂಕೇತಿಕ ಚಿತ್ರ online desk
ರಾಜ್ಯ

ಗಲಭೆ ಪ್ರಕರಣ ವಾಪಸ್ ವಿರುದ್ಧ ರಾಜ್ಯಪಾಲರಿಗೆ BJP ದೂರು; ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಗೆ ಜಾಮೀನು; ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಜಾ; ಇವು ಇಂದಿನ ಪ್ರಮುಖ ಸುದ್ದಿಗಳು 14-10-2024

ಗಲಭೆ ಪ್ರಕರಣ ವಾಪಸ್ ವಿರುದ್ಧ ರಾಜ್ಯಪಾಲರಿಗೆ BJP ದೂರು

ಹುಬ್ಬಳ್ಳಿ ಗಲಭೆ ಪ್ರಕರಣದ ಮೊಕದ್ದಮೆಗಳನ್ನು ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿ ವಿಪಕ್ಷ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಪ್ರತಿಭಟನೆ ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ದೂರು ನೀಡಿದೆ. ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಪ್ರಕರಣ ಹಿಂಪಡೆದ ಕುರಿತು ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಪತ್ರ ಸಲ್ಲಿಸಲಾಗಿದೆ. ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಲಾಗುವುದು ಎಂದು ರಾಜ್ಯಪಾಲರು ತಿಳಿಸಿದ್ದಾರೆ ಎಂದು ಅಶೋಕ್ ಹೇಳಿದ್ದಾರೆ.

ಇನ್ನು ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವ ಸರ್ಕಾರದ ನಿರ್ಧಾರವನ್ನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿಯವರು ಆಡಳಿತದಲ್ಲಿದ್ದಾಗಲೂ ಸಹ ಇಂತಹ ಹಲವು ಪ್ರಕರಣಗಳನ್ನು ವಾಪಸ್ ಪಡೆದಿದ್ದಾರೆ. ಬಿಜೆಪಿಯವರು ಯಾರ ಮೇಲೆ ಆಪಾದನೆ ಮಾಡುತ್ತಿದ್ದಾರೆ ಎಂದು ಗೃಹ ಸಚಿವರು ಪ್ರಶ್ನಿಸಿದ್ದು, ಇದರಲ್ಲಿ ಬರೀ ಅಲ್ಪಸಂಖ್ಯಾತರಿಗೆ ಸೇರಿದ ಪ್ರಕರಣಗಳಿವೆಯೇ? ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಬೇರೆ ಬೇರೆ ಸಂದರ್ಭಗಳಲ್ಲಿ ಪ್ರತಿಭಟನೆ ಮಾಡಿರುವ ಪ್ರಕರಣಗಳಿವೆ ಎಂದು ಹೇಳಿದ್ದಾರೆ.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಗೆ ಜಾಮೀನು

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಬಂಧಿತರಾಗಿರುವ ಮಾಜಿ ಸಚಿವ ಬಿ.ನಾಗೇಂದ್ರಗೆ ಅವರಿಗೆ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ನೀಡಲು ವಿಶೇಷ ನ್ಯಾಯಾಲಯ ಸೂಚನೆ ನೀಡಿದೆ. ವಾಲ್ಮೀಕಿ ಹಗರಣ ಸಂಬಂಧ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿರುವ ಜಾರಿ ನಿರ್ದೇಶನಾಲಯ, ಬಿ.ನಾಗೇಂದ್ರ ಪ್ರಕರಣದ ಮಾಸ್ಟರ್ ಮೈಂಡ್ ಎಂದು ಉಲ್ಲೇಖಿಸಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಜಾಮೀನು ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ ಮತ್ತು ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಜಾಗೊಂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ನ ನ್ಯಾಯಾಧೀಶರಾದ ಜೈಶಂಕರ್ ಅವರು ವಾದ-ಪ್ರತಿವಾದ ಆಲಿಸಿದರು. SPP ಪ್ರಸನ್ನ ಕುಮಾರ್ ಅವರ ವಾದ ಅಂತ್ಯಗೊಂಡ ನಂತರ ಎ13 ದೀಪಕ್ ಹಾಗೂ ಎ8 ಆರೋಪಿ ರವಿಶಂಕರ್ ಗೆ ಕೋರ್ಟ್ ಜಾಮೀನು ನೀಡಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಝೆ ಕೆಟಗರಿ ಭದ್ರತೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ 'Z' ಕೆಟಗರಿ ಭದ್ರತೆ ಒದಗಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆ ವರದಿಯ ನಂತರ ಸರ್ಕಾರ ರಾಜ್ಯಪಾಲರ ಭದ್ರತೆಯನ್ನು ಹೆಚ್ಚಿಸಿದೆ. CRPF ಸಿಬ್ಬಂದಿ ರಾಜ್ಯಪಾಲರ ಭದ್ರತೆ ವಹಿಸಿಕೊಂಡಿದೆ. ಕರ್ನಾಟಕದಲ್ಲಿ ಮಾತ್ರ ಗೆಹ್ಲೋಟ್ ಅವರಿಗೆ Z ಕೆಟಗರಿ ಭದ್ರತೆಯನ್ನು ಒದಗಿಸಲಾಗುವುದು ಎಂದು ಮೂಲಗಳು ಹೇಳಿವೆ.

ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ 5 ವರ್ಷದ ಬಾಲಕ ಸಾವು

ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋವಿಂದಪುರ ರಸ್ತೆಯಲ್ಲಿ ನಡೆದಿದೆ. ಬಿಹೆಚ್ಇಎಲ್'ನ ಬಾಪೂಜಿನಗರದ ನಿವಾಸಿ ತನ್ವೀರ್ ಪಾಷಾ ಎಂಬುವವರ ಪುತ್ರ ತಾಹೀರ್ ಪಾಷಾ ಘಟನೆಯಲ್ಲಿ ಮೃತಪಟ್ಟಿರುವ ಬಾಲಕನಾಗಿದ್ದಾನೆ. ಸ್ನೇಹಿತರೊಂದಿಗೆ ಆಟವಾಡಿದ ಬಳಿಕ ಸಂಜೆ ಮನೆಗೆ ವಾಪಸ್ಸಾಗುತ್ತಿದ್ದ. ಈ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಸ್ಕೂಟರ್'ನ ಹ್ಯಾಂಡಲ್ ಬಾರ್ ಭುಜಕ್ಕೆ ತಾಕಿದ್ದು, ಆಯತಪ್ಪಿ ರಸ್ತೆಗೆ ಬಿದ್ದಿದ್ದಾನೆ. ಇದೇ ವೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ವಾಹನದ ಚಕ್ರಗಳು ಬಾಲಕನ ತಲೆ ಮೇಲೆ ಹರಿದು ಈ ಅವಘಡ ಸಂಭವಿಸಿದೆ.

ಆರ್ಥಿಕ ಸಂಕಷ್ಟ: ಮಕ್ಕಳನ್ನು ಸಾಯಿಸಿ ಆತ್ಮಹತ್ಯೆಗೆ ಶರಣಾದ ದಂಪತಿ

ದಂಪತಿ ತಮ್ಮ ಇಬ್ಬರು ಮಕ್ಕಳನ್ನು ಸಾಯಿಸಿ ತಾವು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಯಲಹಂಕದ ಬಳಿಯ ಸಿಂಗನಾಯಕನಹಳ್ಳಿ ಗ್ರಾಮದ ಯಡಿಯೂರಪ್ಪ ನಗರದಲ್ಲಿ ವರದಿಯಾಗಿದೆ. ಗುಲ್ಬರ್ಗ ಮೂಲದ ಅವಿನಾಶ್ ಕ್ಯಾಬ್ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಆರ್ಥಿಕ ಸಂಕಷ್ಟದಿಂದ ಅವಿನಾಶ್ ಪತ್ನಿ ಮಮತಾ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಮೊದಲಿಗೆ ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿದ್ದು, ನಂತರ ತಾನು ಹಗ್ಗ ಕಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತ್ನಿ ಹಾಗೂ ಮಕ್ಕಳ ಸಾವಿನಿಂದ ಮನನೊಂದ ಅವಿನಾಶ್ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT