ಆತ್ಮಹತ್ಯೆ (ಸಾಂಕೇತಿಕ ಚಿತ್ರ) 
ರಾಜ್ಯ

ಬೆಂಗಳೂರು: ಪ್ರಾಂಶುಪಾಲರ ಕಿರುಕುಳಕ್ಕೆ ಬೇಸತ್ತು ಉಪನ್ಯಾಸಕಿ ಆತ್ಮಹತ್ಯೆಗೆ ಯತ್ನ

ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಅಂತೆಯೇ ತಮ್ಮ ಚೇಂಬರ್'ಗೆ ಕರೆಸಿ ಶಬಾನಾಗೆ ಪ್ರಾಂಶುಪಾಲೆ ಬೈದಿದ್ದರು ಎನ್ನಲಾಗಿದೆ.

ಬೆಂಗಳೂರು: ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯೊಂದು ತಿಲಕನಗರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಶಬಾನಾ (44) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಜಯನನಗರದ 9ನೇ ಹಂತದಲ್ಲಿ ನೆಲೆಸಿರುವ ಶಬಾನಾ ಅವರು, ಎರಡೂವರೆ ವರ್ಷದಿಂದ ಜಯನಗರದ ಖಾಸಗಿ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಆ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿದ್ದಾರೆ.

ವೃತ್ತಿಗೆ ಸಂಬಂಧಿಸಿದಂತೆ ಪ್ರಾಂಶುಪಾಲರು ಹಾಗೂ ಸಹೋದ್ಯೋಗಿಗಳ ನಡುವೆ ಶಬಾನಾ ಮನಸ್ತಾಪವಾಗಿತ್ತು. ಇದೇ ಕಾರಣಕ್ಕೆ ಆಗಾಗ್ಗೆ ಜಗಳ ನಡೆದಿದ್ದವು. ಅಂತೆಯೇ ತಮ್ಮ ಚೇಂಬರ್'ಗೆ ಕರೆಸಿ ಶಬಾನಾಗೆ ಪ್ರಾಂಶುಪಾಲೆ ಬೈದಿದ್ದರು ಎನ್ನಲಾಗಿದೆ. ಈ ಘಟನೆ ಬಳಿಕ ಮನನೊಂದು ಶಬಾನಾ ಅವರು ನಿದ್ರೆ ಮಾತ್ರೆಗಳ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಶಬಾನಾ ಅವರನ್ನು ಕಂಡ ಕಾಲಜು ವಿದ್ಯಾರ್ಥಿಗಳು ಸಿಬ್ಬಂದಿಗೆ ಮಾಹಿತಿ ನೀಡಿ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಹೇಳಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ತಿಲಕನಗರ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ