ಗೋವಿಂದ ಕಾರಜೋಳ 
ರಾಜ್ಯ

ಚಿತ್ರದುರ್ಗದ ನೀರಿನ ಸಮಸ್ಯೆ ಪರಿಹರಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಅಗತ್ಯವಿದೆ: ಗೋವಿಂದ ಕಾರಜೋಳ

ಈ ಯೋಜನೆಯು ಸಾಕಾರಗೊಂಡರೆ, ಚಿತ್ರದುರ್ಗದಲ್ಲಿನ ಎಲ್ಲಾ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ" ಎಂದು ಕಾರಜೋಳ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ 5,300 ಕೋಟಿ ರೂ. ಬಿಡುಗಡೆ ವಿಳಂಬದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ನಿಂದ ಪದೇ ಪದೇ ಟೀಕೆಗಳಿಗೆ ಪ್ರತಿಕ್ರಿಯಿಸಿರುವ ಸಂಸದ ಗೋವಿಂದ ಕಾರಜೋಳ ಹಣ ಬಿಡುಗಡೆಯ ತುರ್ತು ಅಗತ್ಯವನ್ನು ಒತ್ತಿ ಹೇಳಿದರು.

ರಾಷ್ಟ್ರೀಯ ನೀರಾವರಿ ಯೋಜನೆಯಾಗಿ ಗೊತ್ತುಪಡಿಸಲಾದ ಭದ್ರಾ ಮೇಲ್ದಂಡೆ ಯೋಜನೆಯು ಮಧ್ಯ ಕರ್ನಾಟಕವನ್ನು ಕಾಡುತ್ತಿರುವ ತೀವ್ರ ನೀರಿನ ಕೊರತೆಯನ್ನು ಪರಿಹರಿಸುವ ಪ್ರಮುಖ ಯೋಜನೆಯಾಗಿದೆ. ಚಿತ್ರದುರ್ಗ ಪ್ರಸ್ತುತ ದೇಶದಲ್ಲಿ ಎರಡನೇ ಅತಿ ಹೆಚ್ಚು ಬರಪೀಡಿತ ಜಿಲ್ಲೆಯಾಗಿದ್ದು, ರಾಜಸ್ಥಾನದ ಕೆಲವು ಭಾಗಗಳನ್ನು ಮೀರಿಸಿದೆ ಎಂದು ಕಾರಜೋಳ ಹೇಳಿದ್ದಾರೆ. ಹಣ ಬಿಡುಗಡೆಯ ತುರ್ತು ಅಗತ್ಯವನ್ನು ಒತ್ತಿ ಹೇಳಿದ ಅವರು, ಶೀಘ್ರದಲ್ಲೇ ಕೇಂದ್ರದ ಅಧಿಕಾರಿಗಳೊಂದಿಗೆ ಈ ವಿಷಯವನ್ನು ಚರ್ಚಿಸುವುದಾಗಿ ಭರವಸೆ ನೀಡಿದರು. "ಈ ಯೋಜನೆಯು ಸಾಕಾರಗೊಂಡರೆ, ಚಿತ್ರದುರ್ಗದಲ್ಲಿನ ಎಲ್ಲಾ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ" ಎಂದು ಕಾರಜೋಳ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ಕರ್ನಾಟಕದ ಜಲಸಂಪನ್ಮೂಲ ಸಚಿವರಾಗಿದ್ದ ತಮ್ಮ ಅಧಿಕಾರಾವಧಿಯನ್ನು ನೆನಪಿಸಿಕೊಂಡ ಕಾರಜೋಳ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಹಣ ಬಿಡುಗಡೆ ವಿಳಂಬವನ್ನು ಪರಿಹರಿಸಲು ಹಿಂದಿನ ಪ್ರಯತ್ನಗಳನ್ನು ಮೆಲುಕು ಹಾಕಿದರು. ಭದ್ರಾ ಮೇಲ್ಜಂಡೆ ಯೋಜನೆಯ ಅನುಷ್ಠಾನಕ್ಕೆ ಒತ್ತಾಯಿಸಲು ನಾವು ಇಲಾಖಾ ಮುಖ್ಯಸ್ಥರ ಸಭೆಗೆ ದೆಹಲಿಗೆ ತೆರಳಿದ್ದೆವು. ತಾಂತ್ರಿಕ ಕಾರಣಗಳಿಂದ ಹಣ ಬಿಡುಗಡೆಯಾಗಿಲ್ಲ. ಆದರೆ ಇಲಾಖೆಯ ಕಾರ್ಯಚಟುವಟಿಕೆಗಳ ಬಗ್ಗೆ ನನಗೆ ಚೆನ್ನಾಗಿ ತಿಳಿದಿದೆ ಮತ್ತು ಈ ಸಮಸ್ಯೆಯನ್ನು ಪರಿಹರಿಸುತ್ತಾರೆ ಎಂಬ ಭರವಸೆಯಿದೆ ಎಂದು ವಿವರಿಸಿದರು.

ವಿಜಯಪುರವು ಈ ಹಿಂದೆ ಕರ್ನಾಟಕದಲ್ಲಿ ಅತಿ ಹೆಚ್ಚು ಬರಪೀಡಿತ ಪ್ರದೇಶವಾಗಿತ್ತು. ಈಗ ಚಿತ್ರದುರ್ಗವು ದುರದೃಷ್ಟಕರ ಪಟ್ಟವನ್ನು ತೆಗೆದುಕೊಂಡಿದೆ ಎಂದು ಕಾರಜೋಳ ತಿಳಿಸಿದ್ದಾರೆ.

ಅನಿಯಮಿತ ಮುಂಗಾರು ಮಳೆಯಿಂದ ಇಡೀ ಜಿಲ್ಲೆ ತೀವ್ರವಾಗಿ ಪರಿಣಾಮ ಬೀರಿದ್ದು, ಕೃಷಿ ಮತ್ತು ಜೀವನೋಪಾಯವು ದುರ್ಬಲವಾಗಿದೆ ಎಂದರು. ಆದರೆ, ಭದ್ರಾ ಮೇಲ್ದಂಡೆ ಯೋಜನೆಯು ಯಶಸ್ವಿಯಾಗಿ ಅನುಷ್ಠಾನಗೊಂಡರೆ, ಕೆರೆಗೆಳು ಮತ್ತು ನೀರಾವರಿ ಜಾಲಗಳನ್ನು ಪುನರುಜ್ಜೀವನಗೊಳಿಸುತ್ತದೆ, ಜಿಲ್ಲೆಯನ್ನು ಪರಿವರ್ತಿಸುತ್ತದೆ ಮತ್ತು ಹಸಿರಾಗಿಸುತ್ತದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಹಿಂದೆ ಪ್ರಾರಂಭವಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನಂತಹ ದೊಡ್ಡ ಪ್ರಮಾಣದ ಯೋಜನೆಗಳು ಸ್ಥಳೀಯರಿಗೆ ಗಮನಾರ್ಹ ಉದ್ಯೋಗವನ್ನು ಸೃಷ್ಟಿಸಲು ವಿಫಲವಾಗಿವೆ ಎಂದು ವಿಷಾದಿಸಿದರು. ಚಿತ್ರದುರ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಕೊಡುಗೆ ನೀಡುವಂತಹ ಹೆಚ್ಚಿನ ಉದ್ಯೋಗ-ಉತ್ಪಾದನೆಯ ಯೋಜನೆಗಳಿಗೆ ಅವರು ಕರೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT