ಬೆಂಗಳೂರು ಮಳೆ 
ರಾಜ್ಯ

Bengaluru Rains: ಬೆಂಗಳೂರು ಆವರಿಸಿದ Rain Bands; ಸಂಜೆಯೊಳಗೆ ಇನ್ನಷ್ಟು ಹೆಚ್ಚು ಮಳೆ ಸಾಧ್ಯತೆ: ಹವಾಮಾನ ವರದಿ!

ಬೆಂಗಳೂರು ವೆದರ್ ಸಂಸ್ಥೆ ನೀಡಿರುವ ವರದಿಯನ್ವಯ ಬೆಂಗಳೂರಿನ ಮೇಲೆ ದಟ್ಟವಾದ ಮಳೆ ಮೋಡಗಳು ಆವರಿಸಿದ್ದು, ಪರಿಣಾಮ ಇಂದು ಸಂಜೆಯೊಳಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಬೆಂಗಳೂರು: ರಾತ್ರಿಯಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆ ನಿಲ್ಲುವ ಮುನ್ಸೂಚನೆಯೇ ದೊರೆಯುತ್ತಿಲ್ಲ.. ಈ ನಡುವೆ ಸಂಜೆಯೊಳಗೆ ಮತ್ತೆ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ವರದಿಯೊಂದು ಹೇಳಿದೆ.

ಬೆಂಗಳೂರು ವೆದರ್ ಸಂಸ್ಥೆ ನೀಡಿರುವ ವರದಿಯನ್ವಯ ಬೆಂಗಳೂರಿನ ಮೇಲೆ ದಟ್ಟವಾದ ಮಳೆ ಮೋಡಗಳು ಆವರಿಸಿದ್ದು, ಪರಿಣಾಮ ಇಂದು ಸಂಜೆಯೊಳಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ರಾತ್ರಿಯ ನಿರಂತರ ತುಂತುರು ಮಳೆಯ ನಂತರ, ಬೆಂಗಳೂರು ನಗರ ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಮಧ್ಯಾಹ್ನದ ನಂತರ ತೀವ್ರವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ರಾತ್ರಿಯಿಂದ ಬರೊಬ್ಬರಿ 33 ಮಿ.ಮೀ ಮಳೆ

ಇನ್ನು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆ ಸುರಿಯಲಾರಂಭಿಸಿದೆ. ಕಳೆದ ರಾತ್ರಿಯಿಂದ ಈವರೆಗೂ ಬೆಂಗಳೂರಿನಲ್ಲಿ ಬರೊಬ್ಬರಿ 33 ಮಿಮೀ ಮಳೆಯಾಗಿದ್ದು, ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ 25.5 ಮಿಮೀ ಮಳೆಯಾಗಿದೆ. ನೆರೆಯ ಚಿಕ್ಕಬಳ್ಳಾಪುರದಲ್ಲಿ 60.5 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಶೇಷವಾಗಿ ಬೆಂಗಳೂರು ದಕ್ಷಿಣ ಮತ್ತು ಹಂಪಿ ನಗರದಲ್ಲಿ ಗರಿಷ್ಠ 26 ಮಿಮೀ ಮಳೆಯಾಗಿದೆ ಎಂದು ಹೇಳಿದೆ.

ಜನಜೀವನ ಅಸ್ತವ್ಯಸ್ಥ

ಬೆಂಗಳೂರಿನ ಹಲವೆಡೆ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ ಸುರಿಯುತ್ತಿದೆ. ಮೆಜೆಸ್ಟಿಕ್​, ಕಾರ್ಪೊರೇಷನ್​ ಸರ್ಕಲ್, ಶಾಂತಿನಗರ, ಕೆ.ಆರ್​.ಮಾರ್ಕೆಟ್​​​, ವಿಧಾನಸೌಧ, ಶಿವಾಜಿನಗರ, ಬಸವನಗುಡಿ, ಜಯನಗರ, ಶ್ರೀನಗರ, ಹನುಮಂತನಗರ, ತ್ಯಾಗರಾಜನಗರ, ಕೋರಮಂಗಲ, ರಿಚ್​ಮಂಡ್​ ಸರ್ಕಲ್​, ಮಲ್ಲೇಶ್ವರಂ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ, ರಾಜಾಜಿನಗರ ಸೇರಿದಂತೆ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!