ಮುನಿರತ್ನ 
ರಾಜ್ಯ

ಅತ್ಯಾಚಾರ ಪ್ರಕರಣ: BJP ಶಾಸಕ ಮುನಿರತ್ನಗೆ ಕೊನೆಗೂ ಜಾಮೀನು

ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನಗೆ ಕೋರ್ಟ್ ಜಾಮೀನು ನೀಡಿದ್ದು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.

ಬೆಂಗಳೂರು: ದಲಿತ ಸಮುದಾಯದ ಗುತ್ತಿಗೆದಾರನಿಗೆ ಬೆದರಿಕೆ, ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಇದೀಗ ಅತ್ಯಾಚಾರ ಪ್ರಕರಣದಲ್ಲೂ ಬಿಗ್ ರಿಲೀಫ್​ ಸಿಕ್ಕಿದೆ.

ರಾಮನಗರದ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನ ಅವರಿಗೆ ಜಾಮೀನು ನೀಡಿದೆ.

ಮಂಗಳವಾರ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದ ಬೆಂಗಳೂರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರು ಮುನಿರತ್ನಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

ಪೊಲೀಸರ ತನಿಖೆಗೆ ಸಹಕಾರ ನೀಡುವುದು, ಸಾಕ್ಷಿಗಳನ್ನು ನಾಶಪಡಿಸದಿರುವುದು, ಸಾಕ್ಷ್ಯಾಧಾರರ ಮೇಲೆ ಪ್ರಭಾವ ಬೀರದಿರುವುದು ಮತ್ತು ಇಬ್ಬರ ಶ್ಯೂರಿಟಿ ಮೇಲೆ ಜಾಮೀನು ನೀಡಿದ್ದಾರೆ.

ಅಂದಹಾಗೆ ರಾಮನಗರ ಜಿಲ್ಲೆಯ ಕಗ್ಗಲಿಪುರ ಪೊಲೀಸ್‌‍ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ಆಧಾರದ ಮೇಲೆ ಎಸ್‌‍ಐಟಿ ಅಧಿಕಾರಿಗಳು ಮುನಿರತ್ನ ಅವರನ್ನು ಬಂಧಿಸಿದ್ದರು. ಮುನಿರತ್ನ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ತನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತ ಮಹಿಳೆಯೊಬ್ಬರು ದೂರು ನೀಡಿದ್ದರು.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌‍ಐಟಿಗೆ ವಹಿಸಿತ್ತು. ಬಿಬಿಎಂಪಿ ಗುತ್ತಿಗೆದಾರರೊಬ್ಬರಿಗೆ ಜಾತಿ ನಿಂದನೆ, ಪ್ರಾಣ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು. ಆದರೆ ಮಹಿಳೆ ನೀಡಿದ ದೂರಿನನ್ವಯ ಎಸ್‌‍ಐಟಿ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!