ಸಾಂದರ್ಭಿಕ ಚಿತ್ರ 
ರಾಜ್ಯ

BEML: ಎರಡು ಬುಲೆಟ್ ರೈಲು ನಿರ್ಮಾಣಕ್ಕೆ ಗುತ್ತಿಗೆ

ಭಾರತದ ಅತಿ ವೇಗದ ರೈಲು ಅಭಿವೃದ್ಧಿ ಯೋಜನೆಯಲ್ಲಿ ಇದೊಂದು ಮೈಲಿಗಲ್ಲಾಗಲಿದೆ. ಗಂಟೆಗೆ 280 ಕಿ.ಮೀ. ವೇಗದಲ್ಲಿ ಸಾಗುವ ಸಾಮರ್ಥ್ಯವಿರುವ ಸ್ವದೇಶಿ ನಿರ್ಮಿತ ರೈಲು ಇದಾಗಲಿದೆ. ಈ ರೈಲು ಬೆಂಗಳೂರಿನಲ್ಲಿರುವ ರೈಲು ಕೋಚ್ ಸಂಕೀರ್ಣದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಬೆಂಗಳೂರು: ಅತಿವೇಗದ ಎರಡು ರೈಲುಗಳ ವಿನ್ಯಾಸ ಹಾಗೂ ತಯಾರಿಕೆಗೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಭಾರತೀಯ ರೈಲ್ವೆ ಇಲಾಖೆಯ ಅಧೀನಕ್ಕೆ ಸೇರಿರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿಯಿಂದ (ಐಸಿಎಫ್‌) 866.87 ಕೋಟಿ ರು. ಮೌಲ್ಯದ ಗುತ್ತಿಗೆ ಲಭಿಸಿದೆ ಎಂದು ಸರ್ಕಾರಿ ಸ್ವಾಮ್ಯದ ಬಿಇಎಂಎಲ್‌ ಮಂಗಳವಾರ ತಿಳಿಸಿದೆ.

ಪ್ರತಿ ರೈಲು ಎಂಟು ಬೋಗಿಗಳನ್ನು ಒಳಗೊಂಡಿದೆ. ಗಂಟೆಗೆ 280 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮರ್ಥ್ಯ ಹೊಂದಿರಲಿದೆ. ಇದು ಮುಂಬೈ ಹಾಗೂ ಅಹಮದಾಬಾದ್ ನಡುವೆ ನಿರ್ಮಿಸಲಾಗುತ್ತಿರುವ ಅತಿವೇಗದ ರೈಲ್ವೆ ಕಾರಿಡಾರ್‌ನಲ್ಲಿ (ಬುಲೆಟ್‌ ರೈಲು ಯೋಜನೆ) 2027ರಿಂದ ಬಳಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಈ ಮಾದರಿಯ ಒಂದು ರೈಲಿನ ವೆಚ್ಚ 27.86 ಕೋಟಿಯಾಗಲಿದೆ. ಇದರ ವಿನ್ಯಾಸ, ಅಭಿವೃದ್ಧಿ ಸೇರಿ ಎಲ್ಲಾ ಅನುಭವಗಳನ್ನು ಬುಲೆಟ್ ರೈಲು ಅಭಿವೃದ್ಧಿಗೆ ಬಳಸಲಾಗುವುದು’ ಎಂದು ಹೇಳಿದೆ.

‘ಭಾರತದ ಅತಿ ವೇಗದ ರೈಲು ಅಭಿವೃದ್ಧಿ ಯೋಜನೆಯಲ್ಲಿ ಇದೊಂದು ಮೈಲಿಗಲ್ಲಾಗಲಿದೆ. ಗಂಟೆಗೆ 280 ಕಿ.ಮೀ. ವೇಗದಲ್ಲಿ ಸಾಗುವ ಸಾಮರ್ಥ್ಯವಿರುವ ಸ್ವದೇಶಿ ನಿರ್ಮಿತ ರೈಲು ಇದಾಗಲಿದೆ. ಈ ರೈಲು ಬೆಂಗಳೂರಿನಲ್ಲಿರುವ ರೈಲು ಕೋಚ್ ಸಂಕೀರ್ಣದಲ್ಲಿ ಅಭಿವೃದ್ಧಿಪಡಿಸಲಾಗುವುದು. ಜತೆಗೆ 2026ರ ಅಂತ್ಯದ ಹೊತ್ತಿಗೆ ಹಸ್ತಾಂತರಿಸುವ ಗುರಿ ಹೊಂದಲಾಗಿದೆ’ ಎಂದು ಬಿಇಎಂಎಲ್‌ ತಿಳಿಸಿದೆ. ‘ಈ ರೈಲು ಸಂಪೂರ್ಣ ಹವಾನಿಯಂತ್ರಿತ ಕೋಚ್‌ಗಳನ್ನು ಹೊಂದಿರಲಿದೆ. ಚೇರ್ ಕಾರ್‌ಗಳನ್ನು ಅಳವಡಿಸಲಾಗುವುದು. ಪ್ರಯಾಣಿಕರಿಗೆ ಪ್ರಯಾಣದ ಹೊಸ ಅನುಭೂತಿ ನೀಡುವ ಉದ್ದೇಶದೊಂದಿಗೆ ಹಿಂದಕ್ಕೆ ಬಾಗುವ ಹಾಗೂ ತಿರುಗುವ ಸೀಟುಗಳು ಇರಲಿವೆ. ಅಂಗವಿಕಲರಿಗಾಗಿ ವಿಶೇಷ ಆಸನ ವ್ಯವಸ್ಥೆ ಹಾಗೂ ಮನರಂಜನೆಗಾಗಿ ಇನ್ಫೋಟೈನ್ಮೆಂಟ್‌ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆ ಇದೆ ಎಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಆರ್ಥಿಕ ಬಿಕ್ಕಟ್ಟು: ಇಂಟರ್ನೆಟ್‌ ಸ್ಥಗಿತಗೊಳಿಸಿದರೂ ನಿಲ್ಲದ ಉದ್ವಿಗ್ನತೆ; 13ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಈವರೆಗೂ 200ಕ್ಕೂ ಹೆಚ್ಚು ಮಂದಿ ಬಲಿ

4 ವರ್ಷಗಳಲ್ಲಿ ಮೊದಲ ಬಾರಿಗೆ ಖಜಾನೆ ಎಕ್ಸ್ಪೋಷರ್ ಕಡಿತಗೊಳಿಸಿದ ಆರ್‌ಬಿಐ

MGNREGA ಕುರಿತು ಚರ್ಚಿಸಲು ವಿಶೇಷ ಅಧಿವೇಶನ; ಜ. 26 ರಿಂದ ಕಾಂಗ್ರೆಸ್​​ನಿಂದ 'ಮನ್ರೇಗಾ ಉಳಿಸಿ' ಪಾದಯಾತ್ರೆ

ಭೀಕರ: ಡಿವೈಡರ್ ಮೇಲೆ ಹಾರಿ ಜನರ ಮೇಲೆ ಬಿದ್ದ ದುಬಾರಿ ಕಾರು, ಬದುಕಿದ್ದೇ ಪವಾಡ.. Video Viral

ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ, ನೊಬೆಲ್​ ಶಾಂತಿ ಪ್ರಶಸ್ತಿಗೆ ನನ್ನಷ್ಟು ಅರ್ಹರು ಯಾರೂ ಇಲ್ಲ; ಡೊನಾಲ್ಡ್ ಟ್ರಂಪ್

SCROLL FOR NEXT