ಬಿ. ನಾಗೇಂದ್ರ 
ರಾಜ್ಯ

CM-DCM ಹೆಸರು ಹೇಳುವಂತೆ ಕಿರುಕುಳ: ಜೈಲಿಂದ ಹೊರ ಬರುತ್ತಿದ್ದಂತೆ ಇಡಿ ವಿರುದ್ಧ ಮಾಜಿ ಸಚಿವ ನಾಗೇಂದ್ರ ಆರೋಪ ​

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿಂದ ಬುಧವಾರ ಬಿಡುಗಡೆಯಾಗಿದ್ದಾರೆ.

ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ನಾಗೇಂದ್ರ ಅವರಿಗೆ ನ್ಯಾಯಾಲಯದಿಂದ ಸೋಮವಾರ ಜಾಮೀನು ದೊರೆತಿತ್ತು. ನ್ಯಾಯಾಲಯದ ಜಾಮೀನಿನ ಆದೇಶ ಪ್ರತಿ ನಿನ್ನೆ ಜೈಲಿಗೆ ತಲುಪದ ಕಾರಣ ಇಂದು ನಾಗೇಂದ್ರ ಅವರನ್ನು ಜೈಲಿನ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ.

ಈ ನಡುವೆ ನೆಚ್ಚಿನ ನಾಯಕ ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರು ಸಂಭ್ರಮಿಸಿದರು. ನಾಯಕನನ್ನು ಮೇಲೆತ್ತಿ ಕಾಣಿದಾಡಿದ್ದು, ಹೂವಿನ ಹಾರ ಹಾಕಿ, ಬೂದಗುಂಬಳ ಹೊಡೆದು ಸಂಭ್ರಮಾಚರಿಸಿದರು.

ಜೈಲಿನಿಂದ ಹೊರಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಂದ್ರ ಅವರು, ವಾಲ್ಮೀಕಿ ನಿಗಮ ಹಗರಣದಲ್ಲಿ ನನ್ನಿಂದ ಯಾವುದೇ ತಪ್ಪು ನಡೆದಿಲ್ಲ, ಆದರೂ ನನ್ನನ್ನು ಬಂಧಿಸಿ ಇಡಿ ಅಧಿಕಾರಿಗಳು 3 ತಿಂಗಳ ಕಾಲ ಕಿರುಕುಳ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಹೆಸರು ಹೇಳುವಂತೆ ಕಿರುಕುಳ ನೀಡಿದ್ದಾರೆ. ಬಿಜೆಪಿಯ ಹಿರಿಯ ನಾಯಕರ ಒತ್ತಡದಿಂದ ಹೀಗೆ ಮಾಡಿದ್ದಾರೆಂದು ಆರೋಪಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದಲ್ಲಿ ನನ್ನ ಪಾತ್ರ ಇಲ್ಲ. ಎಸ್​ಐಟಿ ನನ್ನ ಪಾತ್ರ ಇಲ್ಲ ಎಂದು ಹೇಳಿದ್ದರೂ ಕೇಂದ್ರ, ಬಿಜೆಪಿಯಿಂದ ಷಡ್ಯಂತ್ರ ರೂಪಿಸಿದೆ. ಇದು ಬ್ಯಾಂಕ್ ಮತ್ತು ಬ್ಯಾಂಕ್​​ ಅಧಿಕಾರಿಗಳಿಂದ ಆಗಿರುವ ಹಗರಣ. ವಿನಾಕಾರಣ ನಮ್ಮ ಸರ್ಕಾರವನ್ನು ಸಿಲುಕಿಸುವ ಕೆಲಸ ಮಾಡಲಾಗಿದೆ. ಕೇಂದ್ರ ಹಾಗೂ ಬಿಜೆಪಿಯಿಂದ ನಮ್ಮ ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಕೇಂದ್ರದ ಯಾವುದೇ ಬೆದರಿಕೆಗಳಿಗೆ ಕಾಂಗ್ರೆಸ್ ಹೆದರುವುದಿಲ್ಲ ಎಂದು ಹೇಳಿದರು.

ಹಣ ವರ್ಗಾವಣೆ ಮಾಡಲು ನನ್ನಿಂದ ಯಾವುದೇ ಶಿಫಾರಸು ಆಗಿಲ್ಲ. ಕಾಂಗ್ರೆಸ್​ ಸರ್ಕಾರವನ್ನು ಅಸ್ಥಿರಗೊಳಿಸಲು ಈ ರೀತಿ ಮಾಡಿದ್ದಾರೆ. ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ, ಈಗ ಹೊರ ಬಂದಿದ್ದೇನೆ. ಎಸ್​​ಐಟಿ ಅಧಿಕಾರಿಗಳು ಕೂಡ ಯಾವ ಇಡಿ, ಸಿಬಿಐಗೆ ಕಡಿಮೆ ಇಲ್ಲ. ಇಡಿ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

3 ಕ್ಷೇತ್ರಗಳ ಉಪಚುನಾವಣೆ ಕುರಿತು ಮಾತನಾಡಿ, ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಯನ್ನು ಕಿತ್ತೊಗೆದಿದ್ದೇವೆ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿಯನ್ನ ಸೋಲಿಸುತ್ತೇವೆ. ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ. ಬಳ್ಳಾರಿ ಜಿಲ್ಲೆಯಿಂದಲೂ ಬಿಜೆಪಿಯನ್ನು ಕಿತ್ತೊಗೆಯುತ್ತೇವೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT