ಸರಣಿ ಅಪಘಾತ 
ರಾಜ್ಯ

ಕಲಬುರಗಿಯಲ್ಲಿ ಸರಣಿ ಅಪಘಾತ: ನಾಲ್ವರು ಸಾವು

ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್‌ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ.

ಕಲಬುರಗಿ: ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್‌ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಮೃತರನ್ನು ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮೌಲಾಬಿ (50) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಆರು ಮಂದಿಯಲ್ಲಿ ಮೂವರು ಸಾವನ್ನಪ್ಪಿದ್ದು, ಉಳಿದವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಅಪಘಾತಕ್ಕೆ ಒಳಗಾದ ಮೂರು ವಾಹನಗಳ ವಿರುದ್ಧ ನಾವು ಭಾರತೀಯ ನ್ಯಾಯ ಸಂಹಿತೆಯ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಅಪಘಾತ ಪ್ರಕರಣವನ್ನು ದಾಖಲಿಸಿದ್ದೇವೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT