ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿಯಲ್ಲಿ ಸರಣಿ ಅಪಘಾತ: ನಾಲ್ವರ ದುರ್ಮರಣ

ಘಟನೆಯಲ್ಲಿ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು. ಮೃತರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೈಕ್ ಸವಾರನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಸಂಗ್ರಹ ಚಿತ್ರ
Manjula VN
Updated On : 17 Oct 2024, 7:39 am

ಕಲಬುರಗಿ: ಕಲಬುರಗಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ರಾಷ್ಟಿಯ ಹೆದ್ದಾರಿಯಲ್ಲಿರುವ ಜೇವರ್ಗಿ ರಸ್ತೆಯಲ್ಲಿರುವ ಹಸನಾಪುರ ಬಳಿ ಬುಧವಾರ ರಾತ್ರಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದು. ಮೃತರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೈಕ್ ಸವಾರನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಜೇವರ್ಗಿ-ಕಲಬುರಗಿ ಹೆದ್ದಾರಿಯ ಹಸನಾಪುರ ಬಳಿಯಲ್ಲಿ ಬೈಕ್‌ನ್ನು ವೇಗವಾಗಿ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದಿುವ ಸವಾರ ಈ ವೇಳೆ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಲಾರಿ ಅಡಿಗೆ ಸಿಲುಕಿ, ಸ್ವಲ್ಪ ದೂರ ಎಳೆದುಕೊಂಡು ಹೋಗಿದೆ.

Advertisement

Advertisement

Also Read

ಕಾರ್ಕಳ: ಲಾರಿ-ಬೈಕ್ ನಡುವೆ ಅಪಘಾತ, ಒಂದೇ ಕುಟುಂಬದ ನಾಲ್ವರ ಸಾವು!

ಕೂಡಲೇ ಲಾರಿಯ ಚಾಲಕ ಬ್ರೇಕ್ ಹಾಕಿದ್ದು, ಈ ವೇಳೆ ಹಿಂದೆ ವೇಗವಾಗಿ ಬರುತ್ತಿದ್ದ ಕಾರ್ ನಿಯಂತ್ರಣಕ್ಕೆ ಬಾರದೆ ಲಾರಿಗೆ ಡಿಕ್ಕಿ ಹೊಡೆದಿದೆ. ಹೀಗೆ ಸರಣಿ ಅಪಘಾತವಾಗಿ ಮೂರು ವಾಹನಗಳು ಒಂದೇ ಸ್ಥಳದಲ್ಲಿ ಅಪಘಾತಕ್ಕೀಡಾಗಿವೆ. ಸರಣಿ ಅಪಘಾತ ಹಿನ್ನೆಲೆ ಹೆದ್ದಾರಿಯಲ್ಲಿ ಕೆಲಕಾರ ಸಂಚಾರ ಸ್ಥಗಿತಗೊಂಡಿತ್ತು.

ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರ ಶವ ಜೇವರ್ಗಿ ಆಸ್ಪತ್ರೆಗೆ ಸಾಗಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನಿಬ್ಬರು ಕಲಬುರಗಿ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ.

ತಡರಾತ್ರಿ ಶವಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement