ಕುಮಾರಸ್ವಾಮಿ 
ರಾಜ್ಯ

ಬೆಂಗಳೂರು ಮಳೆ: ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಕೆಲವೆಡೆ ಬೆಳೆ ಕೂಡಾ ನಷ್ಟವಾಗಿದೆ. ಆದರೆ ಈ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಮಾತನಾಡಿಲ್ಲ

ಬೆಂಗಳೂರು: ಭಾರಿ ಮಳೆಯಿಂದ ನಗರದ ಹಲವೆಡೆ ಜಲಾವೃತ ಹಾಗೂ ಸಂಚಾರ ಅಸ್ತವ್ಯಸ್ಥ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ, ಪರಿಸ್ಥಿತಿಯನ್ನು ನಿಬಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಬೆಳೆ ನಷ್ಟ ಹಾಗೂ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಜನಪರ ಸರ್ಕಾರ ಅಲ್ಲ ಎಂದಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ,ಕಳೆದ ಮೂರು ದಿನಗಳಿಂದ ನಗರದ ಹಲವೆಡೆ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ರಾಜ್ಯದ ಕೆಲವೆಡೆ ಬೆಳೆ ಕೂಡಾ ನಷ್ಟವಾಗಿದೆ. ಆದರೆ ಈ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಮಾತನಾಡಿಲ್ಲ ಎಂದು ಟೀಕಿಸಿದರು.

ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತವಾಗಿವೆ. ಆದರೆ ಇದುವರೆಗೂ ಆ ಪ್ರದೇಶಗಳಿಗೆ ಸಚಿವರಾಗಲಿ ಅವರ ಪ್ರತಿನಿಧಿಗಳಾಗಲಿ ಭೇಟಿ ನೀಡಿಲ್ಲ. ಹಲವಾರು ಪ್ರದೇಶಗಳಲ್ಲಿ ಜನರು ಮನೆ ಖಾಲಿ ಮಾಡಿ ಹೋಟೆಲ್‌ಗಳಲ್ಲಿ ತಂಗಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ಮೊದಲಲ್ಲ, ಕಳೆದ ಮೂರು ವರ್ಷಗಳಿಂದ ಪ್ರತಿ ಮಳೆಗಾಲದಲ್ಲಿ ಇದೇ ರೀತಿ ಆಗುತ್ತಿದೆ. ಸರ್ಕಾರ ಇದನ್ನು ಬಹಳ ಲಘುವಾಗಿ ಪರಿಗಣಿಸುತ್ತಿದೆ, ಇದನ್ನು ಎಲ್ಲೆಡೆ ಹರಡಿ ಕರ್ನಾಟಕದ ಹೆಸರು ಹಾಳು ಮಾಡಬೇಡಿ ಎಂದು ಅವರು ಹೇಳುತ್ತಿದ್ದಾರೆ. ಬೆಂಗಳೂರಿನ ಗತಿಯೇನು? ಎಂದು ಪ್ರಶ್ನಿಸಿದರು.

ಒಂದು ಕಾಲದಲ್ಲಿ ಬೆಂಗಳೂರು ಸಿಲಿಕಾನ್ ಸಿಟಿ ಎಂದು ಕರೆಯಲಾಗುತಿತ್ತು. ಇಲ್ಲಿನ ಜನರು ಪ್ರಮುಖ ಜಿಎಸ್ ಟಿ ಪಾವತಿದಾರರು ಮತ್ತು ಇಂದು ಅವರು ಪ್ರತಿದಿನ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ