ಮುಡಾ ಕಚೇರಿ, ಇಡಿ ಅಧಿಕಾರಿಗಳ ದಾಳಿ 
ರಾಜ್ಯ

ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ; ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇತ್ತೀಚಿಗೆ ECIR ದಾಖಲಿಸಿದ್ದ ಇಡಿ ಅಧಿಕಾರಿಗಳು ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದ್ದು, ಜಾರಿ ನಿರ್ದೇಶನಾಲಯ(ED) ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇತ್ತೀಚಿಗೆ ECIR ದಾಖಲಿಸಿದ್ದ ಇಡಿ ಅಧಿಕಾರಿಗಳು ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಮುಡಾ ಕಚೇರಿಯಲ್ಲಿ 20ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ದಾಖಲೆ ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರ ಬೆಂಗಳೂರಿನ ಕೆಂಗೇರಿ ನಿವಾಸದ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ECIR ಪೊಲೀಸ್ ಎಫ್‌ಐಆರ್‌ಗೆ ಸಮಾನವಾಗಿದೆ. ಇಡಿ ದಾಖಲಿಸಿರುವ ಇಸಿಐಆರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ 1(ಎ1 ಆರೋಪಿ) ಆಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಇಡಿ PMLA ಕಾಯ್ದೆಯಡಿ ECIR ದಾಖಲಿಸಿದ್ದು, ಇದು ಇತರ ಕೆಲವು ಬಲವಂತದ ಕ್ರಮಗಳ ಜೊತೆಗೆ ಸಿಎಂ ಮತ್ತು ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿ ಇದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ವಾರ್ ಗೆ ಹೌತಿಗಳು ಸಜ್ಜು! ಮತ್ತೊಂದು ಜಲಸಂಧಿ ಬಂದ್? ಜಾಗತಿಕ ವ್ಯಾಪಾರಕ್ಕೆ ಮತ್ತಷ್ಟು ಹೊಡೆತ!

ಕೃಷ್ಣಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ಅನುದಾನ: ಅಭಿವೃದ್ಧಿಗೆ ಹಣವಿಲ್ಲವೆಂಬ BJP ಆರೋಪ ಸತ್ಯಕ್ಕೆ ದೂರ; ಸಿಎಂ ಸಿದ್ದರಾಮಯ್ಯ

ಚು. ಆಯೋಗದಿಂದ ಇಂದು ಸಂಜೆ ಮಹತ್ವದ ಸುದ್ದಿಗೋಷ್ಠಿ: 5 ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ಶ್ರೀಗಳು ಎಲ್ಲೆಲ್ಲೋ ದಾರಿ ತಪ್ಪುತ್ತಿದ್ದಾರೆ: ವಿವಾದದ ಕಿಡಿ ಹೊತ್ತಿಸಿದ ರಮೇಶ್ ಬಂಡಿಸಿದ್ದೇಗೌಡ; ಕುಮಾರಸ್ವಾಮಿ ಹೇಳಿದ್ದೇನು?

ಅಭಿಷೇಕ್ ಬಗ್ಗೆ ಭಾರತೀಯ ಆಟಗಾರರಿಗೆ 'ಅಸೂಯೆ ಇದೆಯಾ? ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ಸಂಜು ಸ್ಯಾಮ್ಸನ್

SCROLL FOR NEXT