ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ online desk
ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಅವಾಚ್ಯ ಶಬ್ದ ಬಳಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಪ್ರಕರಣ ದಾಖಲು

ಅಕ್ಟೋಬರ್ 15 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಅವರು ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ವಿಜಯಪುರ: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ನಿಂದಿಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕಾಂಗ್ರೆಸ್ ನಗರಸಭಾ ಸದಸ್ಯ ಪರಶುರಾಮ ಹೊಸಮನಿ ಅವರ ದೂರಿನ ಮೇರೆಗೆ ಶುಕ್ರವಾರ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 15 ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಯತ್ನಾಳ್ ಅವರು ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಹೊಸಮನಿ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಅವರ ದೂರಿನ ಆಧಾರದ ಮೇಲೆ, ಯತ್ನಾಳ್ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಶಾಂತಿ ಕದಡುವ ಉದ್ದೇಶಪೂರ್ವಕ ಅವಮಾನ ಮತ್ತು ಸುಳ್ಳು ಮತ್ತು ತಪ್ಪು ಮಾಹಿತಿ ಹರಡಿದ ಪ್ರಕರಣವನ್ನು ದಾಖಲಿಸಲಾಗಿದೆ. ಶಾಂತಿ ಸೌಹಾರ್ಧವನ್ನು ಕೆಡಿಸುವ ದುರುದ್ದೇಶದಿಂದ ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹೀಯಾಳಿಸಿ ,ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಎಲ್ಲರಿಗೂ ಮಾನಸಿಕ ನೋವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ವಿರೋಧ: ಪ್ರತಾಪ್ ಸಿಂಹಗೆ ಭಾರಿ ಹಿನ್ನಡೆ, PIL ವಜಾಗೊಳಿಸಿದ ಹೈಕೋರ್ಟ್!

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

Asia Cup 2025: ಪ್ರೀತಿ ಇಲ್ಲದ ಮೇಲೆ ಯಾವ ಹ್ಯಾಂಡ್ ಶೇಕ್.. ಡ್ರೆಸ್ಸಿಂಗ್ ರೂಮ್ ಕಡೆ ಭಾರತೀಯರು! ಪಾಕ್ ಆಟಗಾರರಿಗೆ ಹೆಜ್ಜೆ ಹೆಜ್ಜೆಗೂ ನಿರಾಸೆ! Video

ರಾಜಕೀಯದಿಂದ ನಿವೃತ್ತಿಯಾಗಲ್ಲ, ಸಂಸತ್ತಿಗೂ ವೀಲ್‌ಚೇರ್‌ನಲ್ಲಿ ಹೋಗುತ್ತೇನೆ: ಎಚ್.ಡಿ ದೇವೇಗೌಡ

SCROLL FOR NEXT