ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷ ಜೈಲು ಶಿಕ್ಷೆ!

ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕರು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಲೈಂಗಿಕ ಕಿರುಕುಳ (ಸಾಂಕೇತಿಕ ಚಿತ್ರ) — online desk
Srinivas Rao BV
Updated On : 19 Oct 2024, 8:28 pm

ಬೆಂಗಳೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಮೂಡಬಿದರೆಯ 49 ವರ್ಷದ ಪ್ರೌಢಶಾಲೆ ಶಿಕ್ಷಕನಿಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಬೆಳ್ತಂಗಡಿ ಮೂಲದ ಗುರುವ ಮೊಗೇರ ಶಿಕ್ಷೆಗೊಳಗಾದ ವ್ಯಕ್ತಿ. ಈ ವರ್ಷದ ಫೆಬ್ರವರಿಯಲ್ಲಿ 10 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕರು ಅನುಚಿತವಾಗಿ ಸ್ಪರ್ಶಿಸಿದ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಿಗೆ ದೂರು ನೀಡಿದಾಗ ಈ ವಿಷಯ ಬೆಳಕಿಗೆ ಬಂದಿದೆ.

ಇಬ್ಬರು ಹೆಣ್ಣು ಮಕ್ಕಳ ತಂದೆಯಾಗಿರುವ ಆರೋಪಿ ವಿದ್ಯಾರ್ಥಿನಿಯರನ್ನು ಸ್ಟಾಫ್ ರೂಮ್ ಹೊರತುಪಡಿಸಿ ಬೇರೆ ಬೇರೆ ಕೋಣೆಗೆ ಕರೆಸಿ, ಹೋಮ್ ವರ್ಕ್ ನ್ನು ಪರೀಕ್ಷಿಸುತ್ತಿದ್ದರು ಅಷ್ಟೇ ಅಲ್ಲದೇ ಪಾಠದ ಬಗ್ಗೆ ಅನುಮಾನಗಳನ್ನು ಪರಿಹರಿಸಿಕೊಳ್ಳುವಂತೆ ಕೇಳುತ್ತಿದ್ದರು. ಫೆಬ್ರವರಿ 22ರಂದು ಸಂತ್ರಸ್ತೆಯನ್ನು ಶಾಲೆಯ ಕೊಠಡಿಗೆ ಕರೆದು ಲೈಂಗಿಕ ಕಿರುಕುಳ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ.

Advertisement

Advertisement

ಶಾಲೆಯ ಮುಖ್ಯೋಪಾಧ್ಯಾಯರು ನೀಡಿದ ದೂರಿನ ಆಧಾರದ ಮೇಲೆ, ಈ ವರ್ಷ ಮಾರ್ಚ್ 12 ರಂದು ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 10, 12 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಶಿವರುದ್ರಮ್ಮ ಎಸ್ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Also Read

ಲೈಂಗಿಕ ಕಿರುಕುಳ ಆರೋಪ: ಜಾನಿ ಮಾಸ್ಟರ್ ಗೆ ಘೋಷಣೆಯಾಗಿದ್ದ ರಾಷ್ಟ್ರೀಯ ಪ್ರಶಸ್ತಿ ಅಮಾನತು

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಮತ್ತು ಎಫ್‌ಟಿಎಸ್‌ಸಿ 1 ನ್ಯಾಯಾಲಯದ ನ್ಯಾಯಾಧೀಶರಾದ ಡಿ ವಿನಯ್ ವ್ಯಕ್ತಿಯನ್ನು ತಪ್ಪಿತಸ್ಥರೆಂದು ಪರಿಗಣಿಸಿ ಐದು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 10,000 ರೂ ದಂಡ ವಿಧಿಸಿದ್ದು, ಸಂತ್ರಸ್ತೆಗೆ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ಸೂಚಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಹನಾದೇವಿ ಬೋಳೂರು ಸಂತ್ರಸ್ತೆಯ ಪರ ವಾದ ಮಂಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments