ಸಂಗ್ರಹ ಚಿತ್ರ 
ರಾಜ್ಯ

ನಂದಿನಿ ಬ್ರ್ಯಾಂಡ್ ದೋಸೆ-ಇಡ್ಲಿ ಹಿಟ್ಟು ಶೀಘ್ರದಲ್ಲೇ ಮಾರುಕಟ್ಟೆಗೆ..!

ಬೆಂಗಳೂರಿನಲ್ಲಿ ರೆಡಿ ಟು ಕುಕ್‌ ಮಾದರಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಐಡಿ, ಅಸಲ್‌, ಎಂಟಿಆರ್‌ ಮುಂತಾದ ಕಂಪನಿಗಳ ದೋಸೆ, ಇಡ್ಲಿ ಹಿಟ್ಟುಗಳು ಈಗಾಗಲೇ ಚಾಲ್ತಿಯಲ್ಲಿವೆ.

ಬೆಂಗಳೂರು: ಬೆಂಗಳೂರಲ್ಲಿ ಇನ್ನು ಮುಂದೆ ನಂದಿನಿ ಹಾಲಷ್ಟೇ ಅಲ್ಲ, ನಂದಿನಿ ಬ್ರ್ಯಾಂಡ್‌ನ ರೆಡಿ ಟು ಕುಕ್ ದೋಸೆ ಮತ್ತು ಇಡ್ಲಿ ಹಿಟ್ಟು ಕೂಡ ಸಿಗಲಿದೆ.

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಡ್ಲಿ ಮತ್ತು ದೋಸೆಗೆ ಅಪಾರ ಬೇಡಿಕೆಯನ್ನು ಮನಗಂಡಿರುವ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್‌) ಇಡ್ಲಿ ಮತ್ತು ದೋಸೆ ಹಿಟ್ಟು ಉತ್ಪನ್ನ ಮಾರಾಟಕ್ಕೆ ಸಿದ್ಧತೆ ನಡೆಸಿದೆ.

ಬೆಂಗಳೂರಿನಲ್ಲಿ ರೆಡಿ ಟು ಕುಕ್‌ ಮಾದರಿ ಹೆಚ್ಚು ಜನಪ್ರಿಯವಾಗುತ್ತಿದ್ದು, ಐಡಿ, ಅಸಲ್‌, ಎಂಟಿಆರ್‌ ಮುಂತಾದ ಕಂಪನಿಗಳ ದೋಸೆ, ಇಡ್ಲಿ ಹಿಟ್ಟುಗಳು ಈಗಾಗಲೇ ಚಾಲ್ತಿಯಲ್ಲಿವೆ. ಇವುಗಳಿಗೆ ಪೈಪೋಟಿ ನೀಡಲು ಕೆಎಂಎಫ್ ನಿರ್ಧರಿಸಿದ್ದು, ಶೀಘ್ರದಲ್ಲೇ ನಂದಿನಿ ಬ್ರಾಂಡ್‌ನ ರೆಡಿ ಟು ಕುಕ್ ದೋಸೆ ಮತ್ತು ಇಡ್ಲಿ ಹಿಟ್ಟನ್ನು ಮಾರುಕಟ್ಟೆಗೆ ಪರಿಚಯಿಸಲಿದೆ.

ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಮಾತನಾಡಿ, ಇದಕ್ಕಾಗಿ ಜೆಪಿ ನಗರದಲ್ಲಿರುವ ಮ್ಯಾನುಫ್ಯಾಕ್ಚರಿಂಗ್ ಮತ್ತು ಪ್ಯಾಕೇಜಿಂಗ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಉತ್ಪನ್ನವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಸಮಾರಂಭ ಆಯೋಜಿಸಲು ಮುಖ್ಯಮಂತ್ರಿಯವರ ಸಮಯ ಕೋರಲಾಗಿದೆ. ಮುಖ್ಯಮಂತ್ರಿಯವರು ಸಮಯಾವಕಾಶ ನೀಡಿದ ಬಳಿಕ ಉತ್ಪನ್ನಗಳ ಬಿಡುಗಡೆಗೆ ದಿನಾಂಕ ನಿಗದಿಪಡಿಸಲಾಗುವುದು. ಮುಖ್ಯಮಂತ್ರಿಗಳು ಚಾಲನೆ ನೀಡಿದ ನಂತರವೇ ಮಾರಾಟ ಆರಂಭವಾಗಲಿದೆ ಎಂದು ಹೇಳಿದರು.

ಮೊದಲ ಹಂತದಲ್ಲಿ ಪ್ರತಿದಿನ 10 ರಿಂದ 20 ಸಾವಿರ ಕೆಜಿ ಹಿಟ್ಟನ್ನು ಬೆಂಗಳೂರು ನಗರದಲ್ಲಿ ಮಾರಾಟ ಮಾಡಲಾಗುತ್ತದೆ. ಇದಕ್ಕಾಗಿಯೇ ಜಯನಗರದಲ್ಲಿ ಪ್ಯಾಕಿಂಗ್ ಘಟಕ ತೆರೆಯಲಾಗಿದೆ. ಸಿದ್ದ ಹಿಟ್ಟು ಮಾರಾಟಕ್ಕೆ ಪ್ರಾಯೋಗಿಕ ಪರೀಕ್ಷೆಗಳು ಈಗಾಗಲೇ ಪೂರ್ಣಗೊಂಡಿದ್ದು, ಶೀಘ್ರವೇ ಮಾರುಕಟ್ಟೆಗೆ ಪ್ರವೇಶಿಸಲಿದೆ.

ಮಾರುಕಟ್ಟೆಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ದರದಲ್ಲಿ ನಂದಿನಿ ಬ್ರ್ಯಾಂಡ್ ನ ಇಡ್ಲಿ ಮತ್ತು ದೋಸೆ ಹಿಟ್ಟು ಗ್ರಾಹಕರಿಗೆ ಲಭ್ಯವಾಗಲಿದೆ. ಬೆಂಗಳೂರು ನಂತರ ಎರಡನೇ ಹಂತದಲ್ಲಿ ರಾಜ್ಯಾದ್ಯಂತ ನಂದಿನಿ ದೋಸೆ, ಇಡ್ಲಿ ಹಿಟ್ಟು ಮಾರಾಟ ವಿಸ್ತರಿಸಲಾಗುವುದು. 450 ಗ್ರಾಂ ಮತ್ತು 900 ಗ್ರಾಂ ಪ್ಯಾಕೆಟ್ ಗಳಲ್ಲಿ ಇಡ್ಲಿ, ದೋಸೆ ಹಿಟ್ಟು ಮಾರುಕಟ್ಟೆಗೆ ಬರಲಿದ್ದು, ಶೀಘ್ರವೇ ದರ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ಕೆಎಂಎಫ್ ರೆಡಿ ಟು-ಕುಕ್ ಫುಡ್ ವೇದಿಕೆ ಪ್ರವೇಶಿಸಲು ಉತ್ಸುಕವಾಗಿರುವುದೇಕೆ ಎಂಬ ಪ್ರಶ್ನೆಗೆ ಉತ್ತರಿಸಿ, ಪ್ರವೇಶಿಸಬಾರದೇಕೆ? ಇಲ್ಲಿ ಉತ್ತಮ ವ್ಯಾಪಾರ ಅವಕಾಶವಿದೆ ಮತ್ತು ನಂದಿನಿ ಸ್ಥಳೀಯ ಬ್ರಾಂಡ್ ಹೆಸರಾಗಿರುವುದರಿಂದ ಅದರ ಉತ್ಪನ್ನಗಳಿಗೆ ಬೇಡಿಕೆಯಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT