ಸೈಬರ್ ಅಪರಾಧ (ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರು: ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸುತ್ತಿದ್ದ ಆರೋಪಿ ಬಂಧನ

ಆರೋಪಿ ಬಿಕಾಂ ಪದವೀಧರನಾಗಿದ್ದು, ಈಹಿಂದೆ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಬಾಂಬ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಸಂಬಂಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಬೆಂಗಳೂರು: ಕೆಲವು ದಿನಗಳ ಹಿಂದೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಆರೋಪಿಯೊಬ್ಬನನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ.

ಆರೋಪಿಯನ್ನು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಮೂಲದ ದೀಪಾಂಜನ್ ಮಿತ್ರಾ (48) ಎಂದು ಗುರ್ತಿಸಲಾಗಿದೆ. ಅ.4ರಂದು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಹೈಡ್ರೋಜನ್ ಆಧಾರಿತ ಸುಧಾರಿಕ ಸ್ಫೋಟಕ ಸಾಧನ (ಐಇಡಿ) ಇರಿಸಿರುವುದಾಗಿ ಬೆದರಿಕೆ ಇ-ಮೇಲ್ ಬಂದಿತ್ತು. ಈ ಸಂಬಂಧ ವಿಶ್ವೇಶ್ವರಪುರ ಮತ್ತು ಹನುಮಂತನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ತಾಂತ್ರಿಕ ತನಿಖೆಗಳು ಮತ್ತು ಇ-ಮೇಲ್‌ಗಳ ಐಪಿ ವಿಳಾಸದ ಆಧಾರದ ಮೇಲೆ ಆರೋಪಿಯನ್ನು ಡಾರ್ಜಿಲಿಂಗ್‌ನಲ್ಲಿ ಪತ್ತೆ ಹಚ್ಚಲಾಗಿದ್ದು, ಈತನ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಇದೇ ರೀತಿಯ 10 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.

ಆರೋಪಿ ಬಿಕಾಂ ಪದವೀಧರನಾಗಿದ್ದು, ಈಹಿಂದೆ ನಗರದ ವಿವಿಧ ಶಾಲಾ-ಕಾಲೇಜುಗಳಿಗೆ ಬಾಂಬ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸಿರುವ ಸಂಬಂಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಆರೋಪಿಯ ಪಾತ್ರವಿರುವ ಸಾಧ್ಯತೆಯಿದೆ. ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಧ್ಯ ಫಿಲಿಪೈನ್ಸ್ ಪ್ರದೇಶದಲ್ಲಿ ಪ್ರಬಲ ಭೂಕಂಪ: 31 ಮಂದಿ ಸಾವು

ಉಸಿರಾಟದ ಸಮಸ್ಯೆಯಿಂದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಇಂದು ನಾಡಿನಾದ್ಯಂತ ಆಯುಧಪೂಜೆ, ಮಹಾನವಮಿ ಸಂಭ್ರಮ: ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರು

ರಾಜ್ಯದಲ್ಲಿ ಪ್ರವಾಹದಿಂದ ಬೆಳೆಹಾನಿ: ಪ್ರತಿ ಹೆಕ್ಟೇರ್ ಗೆ ಹೆಚ್ಚುವರಿ 8,500 ರೂ ಪರಿಹಾರ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಳೆ ಹಾನಿಯಿಂದ 52 ಮಂದಿ ಸಾವು; ವಾರಸುದಾರರಿಗೆ ಪರಿಹಾರ ವಿತರಣೆ: ಸಿಎಂ ಸಿದ್ದರಾಮಯ್ಯ

SCROLL FOR NEXT