ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಶಾಲೆ ಆರಂಭವಾಗಿ ಅರ್ಧ ವರ್ಷ ಕಳೆದರೂ ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಶೂ ಭಾಗ್ಯ..!

ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳ ನೀಡಲು ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನಲ್ಲಿರುವ ಏಜೆನ್ಸಿಗೆ ಗುತ್ತಿಗೆ ನೀಡಲಾಗಿತ್ತು. ಆಗಸ್ಟ್ 19 ರಂದು ವರ್ಕ್ ಆರ್ಡರ್ ನೀಡಲಾಗಿದ್ದು, ಅಕ್ಟೋಬರ್ 4 ರೊಳಗೆ ಶೂಗಳನ್ನು ಪೂರೈಸಲು ಕಂಪನಿಗೆ ತಿಳಿಸಲಾಗಿತ್ತು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳು ಆರಂಭವಾಗಿ ಅರ್ಧ ವರ್ಷವೇ ಕಳೆದರೂ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್‌ಗಳನ್ನು ವಿತರಿಸಲಾಗಿಲ್ಲ.

ವಿದ್ಯಾರ್ಥಿಗಳಿಗೆ ಶೂ ಹಾಗೂ ಸಾಕ್ಸ್ ಗಳ ನೀಡಲು ಕೋಲಾರದ ಶ್ರೀನಿವಾಸಪುರ ತಾಲ್ಲೂಕಿನಲ್ಲಿರುವ ಏಜೆನ್ಸಿಗೆ ಗುತ್ತಿಗೆ ನೀಡಲಾಗಿತ್ತು. ಆಗಸ್ಟ್ 19 ರಂದು ವರ್ಕ್ ಆರ್ಡರ್ ನೀಡಲಾಗಿದ್ದು, ಅಕ್ಟೋಬರ್ 4 ರೊಳಗೆ ಶೂಗಳನ್ನು ಪೂರೈಸಲು ಕಂಪನಿಗೆ ತಿಳಿಸಲಾಗಿತ್ತು. ಆದರೆ, ಒಪ್ಪಂದದಂತೆ ಕೆಲಸ ನಿರ್ವಹಿಸವಲ್ಲಿ ಸಂಸ್ಥೆ ವಿಫಲವಾಗಿದೆ.

ಈ ಹಿನ್ನೆಲೆಯಲ್ಲಿ ಪಾಲಿಕೆಯ ಶಿಕ್ಷಣ ಇಲಾಖೆಯು ಗುತ್ತಿಗೆ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು, ವಿವರಣೆಯೊಂದಿಗೆ ಒಟ್ಟು ಮೊತ್ತದಿಂದ ಶೇ 2ರಷ್ಟು ದಂಡವನ್ನು ಪಾವತಿಸುವಂತೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಹುಡುಗರಿಗೆ ಕಪ್ಪು ಶೂಗಳು ಮತ್ತು ಹುಡುಗಿಯರಿಗೆ ನೀಲಿ ಕ್ಯಾನ್ವಾಸ್ ಶೂಗಳನ್ನು ಎರಡು ಜೋಡಿ ಸಾಕ್ಸ್‌ಗಳೊಂದಿಗೆ ಆರ್ಡರ್ ಮಾಡಲಾಗಿತ್ತು ಆದರೆ ಸಮಯಕ್ಕೆ ಸರಿಯಾಗಿ ಪೂರೈಕೆ ಮಾಡುವಲ್ಲಿ ಸಂಸ್ಥೆ ವಿಫಲವಾಗಿದೆ. ಒಂದರಿಂದ 2ನೇ ತರಗತಿವರೆಗೆ 24,000 ವಿದ್ಯಾರ್ಥಿಗಳಿದ್ದು, ಎಲ್ಲರೂ ಶೂ, ಸಾಕ್ಸ್ ಗಳಿಂದ ವಂಚಿತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಸ್ತುತ ಬೆಳವಣಿಗೆಯನ್ನು ಬಿಬಿಎಂಪಿ ವಿಶೇಷ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದು, ಗುತ್ತಿಗೆ ರದ್ದು ಪಡಿಸುವ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳಿಗೆ ಶೂಗಳನ್ನು ವಿತರಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗುವುದು. ಸಂಸ್ಥೆಯೊಂದಿಗೆ ಗುತ್ತಿಗೆ ರದ್ದುಗೊಳಿಸಿದರೆ, ಶೀಘ್ರದಲ್ಲೇ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಪಾಲಿಕೆಯು ಮತ್ತೊಂದು ಸಂಸ್ಥೆಯನ್ನು ಸಂಪರ್ಕಿಸುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಫ್ ದೇಶಗಳ ಯಾವುದೇ ಬಂದರು ಸುರಕ್ಷಿತವಲ್ಲ; ಅಮೆರಿಕದ ಕ್ರಮ "ಕಡಲ್ಗಳ್ಳತನ"ಕ್ಕೆ ಸಮ: ಇರಾನ್ ಖಡಕ್ ವಾರ್ನಿಂಗ್

West Asia War: ಇರಾನ್‌ಗೆ ಮಿಲಿಟರಿ ಬೆಂಬಲ ನೀಡಿದರೆ ಶೇ 50ರಷ್ಟು ಸುಂಕ; ಚೀನಾಗೆ ಡೊನಾಲ್ಡ್ ಟ್ರಂಪ್ ಬೆದರಿಕೆ

ಬಿಹಾರದಲ್ಲಿ ಮೊದಲ ಬಾರಿಗೆ ಬಿಜೆಪಿಗೆ CM ಗದ್ದುಗೆ! ನಾಳೆ ನಿತೀಶ್ ರಾಜೀನಾಮೆ? ನೂತನ ಮುಖ್ಯಮಂತ್ರಿ ಆಯ್ಕೆ ಸಾಧ್ಯತೆ

ಬೈಕ್ ಚಾಲನೆ ಮಾಡುತ್ತಾ Reels ರೆಕಾರ್ಡ್, ಭೀಕರ ಅಪಘಾತದಲ್ಲಿ ಯುವತಿ ಸಾವು, ಯುವಕ ಗಂಭೀರ! video

'ಬೆಂಜಮಿನ್ ನೆತನ್ಯಾಹು ಮಾಡಿದ ಫೋನ್ ಕರೆಯೇ ಅಮೆರಿಕ-ಇರಾನ್ ಶಾಂತಿ ಮಾತುಕತೆ ಹಳಿತಪ್ಪುವಂತೆ ಮಾಡಿತು'

SCROLL FOR NEXT