ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯು.ಟಿ.ಖಾದರ್ ಮತ್ತು ಬಸವರಾಜ ಹೊರಟ್ಟಿ 
ರಾಜ್ಯ

ಬೆಳಗಾವಿ: ಡಿಸೆಂಬರ್ 9-20ರವರೆಗೆ ಚಳಿಗಾಲದ ಅಧಿವೇಶನ, ಅಗತ್ಯ ಸಿದ್ಧತೆಗೆ ಸ್ಪೀಕರ್ ಸೂಚನೆ

ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಗಳಿವೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಲಿದ್ದು, ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.

ಬೆಳಗಾವಿ: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಶುಕ್ರವಾರ ಮಾಹಿತಿ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖಾದರ್, ಡಿಸೆಂಬರ್ 9 ರಂದು ಅಧಿವೇಶನ ಪ್ರಾರಂಭವಾಗುವ ಸಾಧ್ಯತೆಗಳಿವೆ. ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆಗಳು ನಡೆಯಲಿದ್ದು, ಚರ್ಚೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ದಿನಾಂಕಗಳನ್ನು ಪ್ರಕಟಿಸುತ್ತಾರೆಂದು ಹೇಳಿದರು.

ಈಗಾಗಲೇ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಅಧಿವೇಶನವನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಹಲವು ಸಲಹೆಗಳನ್ನು ನೀಡಲಾಗಿದೆ. ಬೆಳಗಾವಿಯಲ್ಲಿ ಕಳೆದ ವರ್ಷದ ಅಧಿವೇಶನ ಸುಗಮವಾಗಿ ಸಾಗಿದೆ. ಮುಂಬರುವ ಅಧಿವೇಶನವೂ ಇದೇ ಮಾದರಿಯಲ್ಲಿ ನಡೆಯಬೇಕಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಅಧಿವೇಶನಕ್ಕೆ ಶಾಸಕರ ಉತ್ತಮ ಹಾಜರಾತಿಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಬಾರಿಯ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಕುರಿತು ಗಂಭೀರ ಚರ್ಚೆಗೆ ಸಾಕಷ್ಟು ಸಮಯ ಮೀಸಲಿಡಲಾಗುವುದು. ಕಳೆದ ಅಧಿವೇಶನದಲ್ಲಿ ಉಭಯ ಸದನಗಳಲ್ಲಿಯೂ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದ್ದು, ಚರ್ಚೆಯ ವೇಳೆ ಶಾಸಕರ ಭಾಗವಹಿಸುವಿಕೆಯೂ ಉತ್ತಮವಾಗಿತ್ತು ಎಂದರು.

ಅಧಿವೇಶನದ ಸಮಯದಲ್ಲಿ ಸುವರ್ಣ ಸೌಧಕ್ಕೆ ಭೇಟಿ ನೀಡುವ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು ಸರ್ಕಾರವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಮುಖ್ಯಮಂತ್ರಿ, ಸಚಿವರು ಮತ್ತು ಶಾಸಕರಿಗೆ ಅನನುಕೂಲ ಆಗದಂತೆ ನಿಗಾವಹಿಸಬೇಕು. ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ಚಾಲಕರಿಗೆ ಹಾಗೂ ಪೊಲೀಸರಿಗೆ ವಸತಿ, ನೀರು, ಊಟ, ಉಪಾಹಾರದ ವ್ಯವಸ್ಥೆ ಸರಿಯಾಗಿ ಮಾಡಬೇಕು. ಪ್ರತಿಭಟನಾ ಸ್ಥಳಗಳಲ್ಲೂ ಸೂಕ್ತ ಸೌಲಭ್ಯ ನೀಡಲು ಸೂಚಿಸಿದ್ದೇವೆ,

ಬೆಳಗಾವಿಯಲ್ಲಿ ಶಾಸಕರ ಭವನ ನಿರ್ಮಾಣ ಚರ್ಚೆ ಆಗಿದೆ‌. ಶಾಸಕರ ಭವನ ನಿರ್ಮಾಣಕ್ಕೆ ಯತ್ನಿಸಲಾಗುವುದು. ಪ್ರತಿ ವರ್ಷ ಅಧಿವೇಶನ ವೇಳೆ ವಸತಿಗಾಗಿ ರೂ.6 ಕೋಟಿ ವೆಚ್ಚ ಮಾಡಲಾಗುತ್ತಿದೆ. ಭವನ ನಿರ್ಮಿಸಿದರೆ ಇದನ್ನು ತಗ್ಗಿಸಬಹುದು. ‘ಈ ಬೇಡಿಕೆ ದಶಕಗಳಿಂದ ಇದೆ. ವರ್ಷದಿಂದ ವರ್ಷಕ್ಕೆ ವಸತಿ ವೆಚ್ಚ ಹೆಚ್ಚುತ್ತಲೇ ಇದೆ. ಈವರೆಗೆ ವ್ಯಯಿಸಿದ ವೆಚ್ಚದಲ್ಲಿ ದೊಡ್ಡ ಕಟ್ಟಡವೇ ನಿರ್ಮಾಣವಾಗುತ್ತಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT