ಸಾಂದರ್ಭಿಕ ಚಿತ್ರ 
ರಾಜ್ಯ

ಸಾಲದ ಶೂಲ: ಬಡ್ಡಿ ಕೊಟ್ಟಿಲ್ಲ ಎಂದು 17 ವರ್ಷದ ಪುತ್ರಿ ಮೇಲೆ ಅತ್ಯಾಚಾರ, ನೆಲಮಂಗಲದಲ್ಲಿ POCSO ಕೇಸ್!

ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ಬೆಂಗಳೂರು: ಸಾಲದ ಬಡ್ಡಿ ಕೊಟ್ಟಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಯುವತಿ ಮೇಲೆ ಅತ್ಯಾಚಾರ ಎಸೆಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ವರದಿಯಾಗಿದೆ.

ಖಾಸಗಿ ಮಾಧ್ಯಮವೊಂದು ಈ ಬಗ್ಗೆ ವರದಿ ಮಾಡಿದ್ದು, ಹಾಡಹಗಲೇ 17 ವರ್ಷದ ಬಾಲಕಿ ಮೇಲೆ ದುರುಳನಿಂದ ಅತ್ಯಾಚಾರ ಮಾಡಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.

ವರದಿಯಲ್ಲಿರುವಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ (pocso case) ದಾಖಲಾಗಿದ್ದು, ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಆರೋಪಿ ರವಿಕುಮಾರ್(39 ವರ್ಷ) ಎಂಬಾತನನ್ನು ಬಂಧಿಸಲಾಗಿದೆ.

ಮೂಲಗಳ ಪ್ರಕಾರ ಸಂತ್ರಸ್ತ ಯುವತಿಯ ತಂದೆ ಆರೋಪಿ ರವಿ ಕುಮಾರ್ ಬಳಿ 70 ಸಾವಿರ ರೂ. ಹಣ ಪಡೆದಿದ್ದರು. ಆದರೆ ಸಮಯಕ್ಕೆ ಅದನ್ನು ಹಿಂದುರುಗಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಸಾಕಷ್ಟು ಬಾರಿ ರವಿಕುಮಾರ್ ಸಂತ್ರಸ್ಥೆಯ ತಂದೆಯೊಂದಿಗೆ ಬಡ್ಡಿ ಮತ್ತು ಅಸಲು ಪಾವತಿಗಾಗಿ ಜಗಳ ಮಾಡಿದ್ದ. ಬಳಿಕ ಅವರು 30 ಸಾವಿರ ರೂ. ಸಾಲ ತೀರಿಸಿದ್ದರು. ಇನ್ನುಳಿದ 40 ಸಾವಿರ ರೂ. ಜೊತೆಗೆ ಬಡ್ಡಿ ಹಣ ನೀಡದಿದ್ದಕ್ಕೆ ರವಿಕುಮಾರ್ ಪೀಡಿಸುತ್ತಿದ್ದ.

ಇದೇ ವೇಳೆ ಆಗಾಗ ಮನೆ ಬಳಿ ಬಂದು ಬಡ್ಡಿ ಹಣಕ್ಕಾಗಿ ಸಂತ್ರಸ್ತೆ ಹಾಗೂ ಆಕೆಯ ತಂದೆಯನ್ನು ಪೀಡಿಸುತ್ತಿದ್ದ. ಈ ಹಿಂದೆ ಬಲವಂತವಾಗಿ ಸಂತ್ರಸ್ತೆಗೆ ಆರೋಪಿ ರವಿಕುಮಾರ್ ಕಿಸ್ ಕೂಡ​ ಕೊಟ್ಟಿದ್ದ. ಮಾತ್ರವಲ್ಲದೇ ಕಿಸ್​ ಕೊಟ್ಟಿರುವುದನ್ನು ಫೋಟೋ ತೆಗೆದಿಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ. ಇದೀಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಸಂತ್ರಸ್ತೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಮಾದನಾಯಕನ ಹಳ್ಳಿ ಪೊಲೀಸರು ರವಿಕುಮಾರ್​​ನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT