ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ; 13 ಜಿಲ್ಲೆಗಳಿಗೆ 'ಯೆಲ್ಲೂ ಅಲರ್ಟ್'

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ,ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ' ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಭಾನುವಾರವೂ ಮಳೆಯಾಗಿದೆ. ನಾಳೆಯೂ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ 13 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ,ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ' ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.

ಈ ಜಿಲ್ಲೆಗಳ ಕೆಲವಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಸಾಧಾರಣ ಮಲೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯಲ್ಲಿ ಗಂಟೆಗೆ 35 ಕಿ. ಮೀ ನಿಂದ 55 ಕಿ. ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಂಗಳವಾರವೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಸೇರಿದಂತೆ ಎಂಟು ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ನೀಡಲಾಗಿದೆ. ಇನ್ನೂ 6 ದಿನಗಳ ಕಾಲ ಮಳೆ ಮುಂದುವರೆಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT