ಬಡಾವಣೆ ಜಲಾವೃತಗೊಂಡಿರುವುದು. 
ರಾಜ್ಯ

ನಗರದಲ್ಲಿ ಮುಂದುವರೆದ ಮಳೆ ಆರ್ಭಟ: ಸಾಯಿ ಲೇಔಟ್‌ ಮತ್ತೆ ಜಲಾವೃತ, ಅಧಿಕಾರಿಗಳಿಗೆ ಹಿಡಿಶಾಪ

ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಆರ್ಭಟ ಮುಂದುವರೆದಿದ್ದು, ಕೆಆರ್ ಪುರಂ ವಿಧಾನಸಭಾ ಕ್ಷೇತ್ರದ ಹೊರಮಾವು ವಾರ್ಡಿನ ಸಾಯಿಬಾಬಾ ಲೇಔಟ್‌ ಮತ್ತೆ ಜಲಾವೃತಗೊಂಡಿದೆ.

ಭಾರೀ ಮಳೆಯಿಂದಾಗಿ ಜಲಾವೃತಗೊಂಡಿದ್ದ ಲೇಔಟ್ ನಲ್ಲಿ ಮೊನ್ನೆಯಷ್ಟೇ ಫೈರ್ ಇಂಜಿನ್ ಮೂಲಕ ನೀರನ್ನು ಹೊರ ಹಾಕಲಾಗಿತ್ತು. ಈಗ ಲೇಔಟ್ ಮತ್ತೆ ಜಲಾವೃತಗೊಂಡಿದ್ದು, ಜನ ಹೈರಾಣಾಗಿದ್ದಾರೆ.

ಪ್ರೆಸ್ಟೀಜ್ ಶಾಲೆಯ ಶಿಕ್ಷಕಿ ನೀಲುಫುರ್ ಅಹಮದ್ ಅವರು ಮಾತನಾಡಿ, ಭಾರೀ ಮಳೆಯ ಪರಿಣಾಮ ನೀರು ತುಂಬಿಕೊಂಡು ಸಂಪ್ ಮೋಟಾರ್ ಹಾಳಾಗಿತ್ತು. ಎಲೆಕ್ಟ್ರಿಕಲ್ ಕೆಲಸಕ್ಕೆ ರೂ.10,000 ಖರ್ಟು ಮಾಡಿದ್ದೆ. ಇದೀಗ ಮತ್ತೆ ಮನೆಗೆ ನೀರು ನುಗ್ಗಿದೆ. ಮನೆಯಲ್ಲಿ ಮೂರು ಇಂಚುಗಳಷ್ಟು ನೀರಿದೆ. ಹಾಸಿಗೆ, ಸೋಫಾ ಎಲ್ಲವೂ ಹಾಳಾಗಿದೆ. ಬಡಾವಣೆಯಲ್ಲಿ ಕಳೆದ 10 ವರ್ಷಗಳಿಂದ ಇದೇ ರೀತಿಯ ಸಮಸ್ಯೆ ಕಾಡುತ್ತಿದೆ. ಶಾಸಕ ಬೈರತಿ ಬಸವರಾಜ್ ಆಗಲಿ, ಬಿಬಿಎಂಪಿ ಅಧಿಕಾರಿಗಳಾಗಲಿ ನಮ್ಮ ಕಷ್ಟದ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಸ್ಥಳೀಯ ನಿವಾಸಿಗಳು ನ್ಯಾಯಾಲಯ ಪ್ರವೇಶಿಸಿ, ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿದ್ದಾರೆ.

ಇಲ್ಲಿ ಮಕ್ಕಳು, ವೃದ್ಧರು ಮತ್ತು ಮಹಿಳೆಯರು ಇದ್ದಾರೆ. ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ನೀರಿನಿಂದ ಹರಡುವ ಸೋಂಕು, ಸೊಳ್ಳೆಗಳಿಂದ ಹರಡುವ ರೋಗಗಳು ಹೆಚ್ಚಾಗಿ ಅನೇಕರು ಬಲಿಯಾಗುತ್ತಾರೆ ಎಂದು ಬಡಾವಣೆಯ ಹಿರಿಯ ನಾಗರಿಕರೊಬ್ಬರು ಹೇಳಿದ್ದಾರೆ.

ಈ ಮಧ್ಯೆ, ಬಿಡಿಎಯಿಂದ ಯಾವುದೇ ಅನುಮತಿಯಿಲ್ಲದೆ ಅಕ್ರಮವಾಗಿ ಲೇಔಟ್ ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದಾರೆ.

ಲೇಔಟ್‌ನಲ್ಲಿ ರೈಲ್ವೆ ಸೇತುವೆಯ ಕೆಳಗೆ ಅಭಿವೃದ್ಧಿ ಕಾಮಗಾರಿಯನ್ನು ಕಾರ್ಯಗತಗೊಳಿಸಲಾಗುತ್ತಿದೆ. ಪ್ರಸ್ತುತ, ಮಳೆ ನೀರು ಚರಂಡಿಯು ಕೇವಲ 20 ಅಡಿ ಅಗಲದ ಪ್ರದೇಶವನ್ನು ಹೊಂದಿದ್ದು, ಮಳೆಯ ಸಮಯದಲ್ಲಿ ಹೆಬ್ಬಾಳ-ನಾಗವಾರ ಮೇಲ್ಭಾಗದಿಂದ ನೀರು ಹರಿದು ಬಂದಾಗ ಪ್ರವಾಹ ಪರಿಸ್ಥಿತಿ ಎದುರಾಗುತ್ತಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!