ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸೆಕ್ಸ್ ವಿಡಿಯೋ ಹಗರಣ: ಮೂರು ಪ್ರಕರಣಗಳಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ

ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠ, ಮೂರೂ ಪ್ರಕರಣಗಳಲ್ಲೂ ಜಾಮೀನು ತಿರಸ್ಕರಿಸಿದೆ.

ಪ್ರಜ್ವಲ್ ರೇವಣ್ಣ
Lingaraj Badiger
Updated On : 21 Oct 2024, 4:01 pm

ಬೆಂಗಳೂರು: ಸೆಕ್ಸ್ ವಿಡಿಯೋ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ಬಿಗ್ ಶಾಕ್ ನೀಡಿದ್ದು, ಜೆಡಿಎಸ್ ನಾಯಕ ಸಲ್ಲಿಸಿದ್ದ ಮೂರು ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ.

ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​ ಏಕಸದಸ್ಯ ಪೀಠ, ಮೂರೂ ಪ್ರಕರಣಗಳಲ್ಲೂ ಜಾಮೀನು ತಿರಸ್ಕರಿಸಿದೆ.

ಎರಡು ಅತ್ಯಾಚಾರ ಪ್ರಕರಣ ಮತ್ತು ಒಂದು ಮಹಿಳೆ ಅಶ್ಲೀಲ ದೃಶ್ಯ ಸೆರೆಹಿಡಿದ ಪ್ರಕರಣಕ್ಕೆ ಸಂಬಂಧಿಸಿದ ಜಾಮೀನು ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಇನ್ನೊಂದು ಅತ್ಯಾಚಾರ ಪ್ರಕರಣದ ಆದೇಶ ಪ್ರಕಟಿಸುವುದು ಬಾಕಿಯಿದೆ.

Advertisement

Advertisement

ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ ಮೂರು ಪ್ರಕರಣಗಳಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಇಂದು ವಜಾ ಮಾಡಿದೆ.

Also Read

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಕ್ಯಾಮರಾ ಮೂಲಕ ವಿಚಾರಣೆ ನಡೆಸಲು ಹೈಕೋರ್ಟ್ ಗೆ SIT ಮನವಿ

ಇನ್ನು ಪ್ರಜ್ವಲ್‌ ರೇವಣ್ಣ ಪರವಾಗಿ ವಕೀಲ ಜಿ ಅರುಣ್‌ ವಾದ ಮಂಡಿಸಿದ್ದು, ರಾಜ್ಯ ಸರ್ಕಾರದ ವಿಶೇಷ ತನಿಖಾ ಸಂಸ್ಥೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್‌ ಅವರು ಪ್ರತಿವಾದ ಮಂಡಿಸಿದ್ದರು.

ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿರುವ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಇನ್ನೆರಡು ದಿನದಲ್ಲಿ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement