ಸಾಂದರ್ಭಿಕ ಚಿತ್ರ 
ರಾಜ್ಯ

Bengaluru Rains: ಭಾರಿ ಮಳೆ ಮುನ್ಸೂಚನೆ; ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ!

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿದ್ದರಿಂದ ಕಲಿಕಾ ಸಮಯ ಕೊರತೆ ನೀಗಿಸಲು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ವ್ಯಾಪ್ತಿಯ ಎಲ್ಲ ಎಲ್ಲ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ ಆಯುಕ್ತರು ಬೆಂಗಳೂರಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇಂದು ಒಂದು ದಿನದ ಮಟ್ಟಿಗೆ ಈ ಆದೇಶ ಅನ್ವಯವಾಗಲಿದ್ದು, ಭಾರಿ ಮಳೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ.

ಅಂಗನವಾಡಿ, ಎಲ್​​​​ಕೆಜಿ, ಯುಕೆಜಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಅನುದಾನಿತ ಶಾಲೆ, ಅನುದಾನ ರಹಿತ ಶಾಲೆ ಸೇರಿ ನಗರದ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್​ ಆದೇಶ ಹೊರಡಿಸಿದ್ದಾರೆ.

ಶನಿವಾರ-ಭಾನುವಾರ ಹೆಚ್ಟುವರಿ ತರಗತಿ

ಮುಂಜಾಗ್ರತಾ ಕ್ರಮವಾಗಿ ರಜೆಯನ್ನು ನೀಡಿದ್ದರಿಂದ ಕಲಿಕಾ ಸಮಯ ಕೊರತೆ ನೀಗಿಸಲು ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳ ಪೋಷಕರು, ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ