ಎನ್.ಎಸ್. ಬೋಸರಾಜು 
ರಾಜ್ಯ

ಅರಣ್ಯ ಭೂಮಿ ಒತ್ತುವರಿ: ಸಚಿವ ಎನ್.ಎಸ್ ಭೋಸರಾಜು ವಿರುದ್ಧ RTI ಕಾರ್ಯಕರ್ತ ದೂರು

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಯಚೂರಿನ ಸರ್ವೆ ಸಂಖ್ಯೆ 1252, 125ರಲ್ಲಿನ ಐದು ಎಕರೆ ಮೀಸಲು ಅರಣ್ಯ ಭೂಮಿಯನ್ನು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಬೋಸರಾಜು ಅವರ ಪತ್ನಿ ಎನ್.ಕೃಷ್ಣ ವೇಣಿ ಹೆಸರಿನಲ್ಲಿ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿರುವ ಕಲ್ಲಹಳ್ಳಿ, ಸಚಿವ ಸ್ಥಾನದಿಂದ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತೊಂದೆಡೆ ದಿನೇಶ್ ಹಲ್ಲಹಳ್ಳಿ ಅವರ ಆರೋಪಗಳನ್ನು ಸಂಪೂರ್ಣ ಸುಳ್ಳು ಮತ್ತು ಮಾನಹಾನಿಕರ ಎಂದು ಬೋಸರಾಜು ತಳ್ಳಿ ಹಾಕಿದ್ದಾರೆ.

ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘‘ನಾನಾಗಲಿ, ನನ್ನ ಕುಟುಂಬದವರಾಗಲಿ ಇದುವರೆಗೆ ಮೀಸಲು ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ. ವಾಸ್ತವವಾಗಿ, ಅರಣ್ಯ ಅಧಿಕಾರಿಗಳು ನೀಡಿದ ನೋಟೀಸ್ ಈಗಾಗಲೇ ಹೈಕೋರ್ಟ್‌ನ ಕಲಬುರಗಿ ಪೀಠದಿಂದ ರದ್ದುಗೊಳಿಸಲಾಗಿದೆ. 1999 ರಲ್ಲಿ ಸಾರ್ವಜನಿಕ ಜೀವನ ಪ್ರವೇಶಿಸುವ ಮುನ್ನಾ 1987 ರಲ್ಲಿ ಕಾನೂನುಬದ್ಧವಾಗಿ ಭೂಮಿಯನ್ನು ಖರೀದಿಸಲಾಗಿದೆ. ಆಗ ನಾನು ಶಾಸಕ ಅಥವಾ ಎಂಎಲ್‌ಸಿ ಆಗಿರಲಿಲ್ಲ, ಮಂತ್ರಿಯಾಗಿರಲಿಲ್ಲ ಎಂದು ತಿಳಿಸಿದರು.

ರಾಜಕೀಯ ವಿರೋಧಿಗಳ ಸಂಚಿನಿಂದ ನ್ಯಾಯಾಲಯದ ತೀರ್ಪಿನ ಹೊರತಾಗಿಯೂ ಈ ಆರೋಪಗಳನ್ನು ಮಾಡಲಾಗುತ್ತಿದೆ. ಇದು ನನ್ನ ವಿರುದ್ಧ ಮಾನಹಾನಿ ಮಾಡುವ ರಾಜಕೀಯ ನಡೆಯಾಗಿದೆ. ಆದಾಯ ತೆರಿಗೆ ಸಲ್ಲಿಕೆ ಮತ್ತು ಲೋಕಾಯುಕ್ತಕ್ಕೆ ಅಧಿಕೃತ ಆಸ್ತಿ ಬಹಿರಂಗಪಡಿಸುವಿಕೆ ಎರಡರಲ್ಲೂ ಪಾರದರ್ಶಕವಾಗಿ ತಮ್ಮ ಪತ್ನಿಯ ಹೆಸರಿನಲ್ಲಿರುವ ಎಲ್ಲಾ ಭೂಮಿಯನ್ನು ಘೋಷಿಸಿದ್ದೇನೆ. ತಮ್ಮ ವಿರುದ್ಧದ ಆರೋಪಗಳು ಆಧಾರ ರಹಿತವಾಗಿದ್ದು, ಯಾವುದೇ ಪರಿಶೀಲನೆ ಇಲ್ಲದೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ ಎದು ಸಚಿವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!