ವಾಹನ ಸವಾರರು ಬಿದ್ದ ದೃಶ್ಯ  
ರಾಜ್ಯ

ಚಾಮರಾಜನಗರ: ವಿದ್ಯುತ್ ತಂತಿ ತಗುಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಸ್ಥಳದಲ್ಲೇ ಸಾವು

ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಚಾಮರಾಜನಗರ: ಭಾರೀ ಮಳೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಜೋತುಕೊಂಡಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಮೃತಪಟ್ಟವರನ್ನು ತಾಲೂಕಿನ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48 ವ) ಮತ್ತು ಮಲ್ಲೇಶ್ (40 ವ) ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಸ್ಥಳಕ್ಕೆ ಪೂರ್ವ ಪೊಲೀಸ್‌ ಠಾಣೆ ಪೊಲೀಸರು ಭೇಟಿ ನೀಡಿದ್ದು, ಈವರೆಗೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ. ಆದರೇ ಚೆಸ್ಕಾಂ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ