2014 ರಲ್ಲಿ ಕೊಪ್ಪಳದಲ್ಲಿ ನಡೆದ ಘಟನೆ (ಸಂಗ್ರಹ ಚಿತ್ರ) 
ರಾಜ್ಯ

ಕೊಪ್ಪಳ: ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲು ಸುಟ್ಟ ಪ್ರಕರಣ; 101 ಆರೋಪಿಗಳಿಗೆ ಅಕ್ಟೋಬರ್ 24 ರಂದು ಶಿಕ್ಷೆ ಪ್ರಕಟ

ಈ ಘಟನೆ 2014ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಗ್ರಾಮದ ಹೋಟೆಲ್‌ಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು.

ಕೊಪ್ಪಳ: ಇಡೀ ದೇಶದ ಗಮನ ಸೆಳೆದಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರುಕುಂಬಿ ಗ್ರಾಮದಲ್ಲಿ ದಲಿತರ ಗುಡಿಸಲುಗಳಿಗೆ ಅನ್ಯ ಸಮುದಾಯದವರು ಬೆಂಕಿ ಹಚ್ಚಿದ ಘಟನೆಯಲ್ಲಿ ಆರೋಪಿಗಳಾಗಿರುವ 101 ಮಂದಿಗೆ ಶಿಕ್ಷೆ ನೀಡಲು ನ್ಯಾಯಾಲಯ ಸಜ್ಜಾಗಿದ್ದು ಗುರುವಾರ ಶಿಕ್ಷೆ ಪ್ರಕಟವಾಗಲಿದೆ.

ಈ ಘಟನೆ 2014ರಲ್ಲಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಗ್ರಾಮದ ಹೋಟೆಲ್‌ಗಳು ಮತ್ತು ಕ್ಷೌರಿಕ ಅಂಗಡಿಗಳಲ್ಲಿ ದಲಿತರಿಗೆ ಪ್ರವೇಶ ನಿರಾಕರಿಸಿದ್ದಕ್ಕೆ ಸಂತ್ರಸ್ತರು ಮತ್ತು ಆರೋಪಿಗಳ ನಡುವೆ ಘರ್ಷಣೆ ನಡೆದಿತ್ತು. ಹಲವು ದಲಿತ ಮುಖಂಡರು ಕೊಪ್ಪಳ ಜಿಲ್ಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದರು. ಈ ಪ್ರಕರಣದಲ್ಲಿ ಆರಂಭದಲ್ಲಿ 117 ಮಂದಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಅವರಲ್ಲಿ ಕೆಲವರು ಸಾವನ್ನಪ್ಪಿದ್ದರೆ, 100 ಆರೋಪಿಗಳನ್ನು ಬಂಧಿಸಲಾಗಿದೆ. ಓರ್ವ ಆರೋಪಿ ಇನ್ನೂ ನಾಪತ್ತೆಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. 101 ಮಂದಿಗೆ ಏಕಕಾಲದಲ್ಲಿ ಶಿಕ್ಷೆ ವಿಧಿಸುತ್ತಿರುವುದು ಜಿಲ್ಲೆಯ ಇತಿಹಾಸದಲ್ಲಿ ಇದೇ ಮೊದಲು.

ಈ ಘಟನೆಯ ನಂತರ ಮೂರು ತಿಂಗಳ ಕಾಲ ಮರುಕುಂಬಿ ಗ್ರಾಮದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ದೌರ್ಜನ್ಯವನ್ನು ವಿರೋಧಿಸುವ ನಾಯಕತ್ವ ವಹಿಸಿದ್ದ ದಲಿತ ಮುಖಂಡ ವೀರೇಶ ಮರುಕುಂಬಿ 2014ರಲ್ಲಿ ಕೊಪ್ಪಳ ರೈಲು ನಿಲ್ದಾಣದ ಬಳಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ದಲಿತರ ಕೇರಿಗೆ ನುಗ್ಗಿದ್ದ ಗ್ರಾಮದ ನೂರಾರು ಸವರ್ಣೀಯರು, ದಲಿತರಿಗೆ ಸೇರಿದ್ದ ನಾಲ್ಕು ಗುಡಿಸಲುಗಳಿಗೆ ಬೆಂಕಿ ಹಚ್ಚಿದ್ದರು. ಅನೇಕರ ಮೇಲೆ ಸಿಕ್ಕಸಿಕ್ಕ ವಸ್ತುಗಳಿಂದ ಹಲ್ಲೆ ಮಾಡಿದ್ದರು.

ಬೆಂಕಿ ಅವಘಡದಲ್ಲಿ ಗುಡಿಸಲುಗಳು ಸುಟ್ಟು ಭಸ್ಮವಾಗಿದ್ದವು. ಅಗ್ನಿಶಾಮಕ ಸಿಬ್ಬಂಧಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ರು ಕೂಡಾ ಗುಡಿಸಲುಗಳು ಅಷ್ಟರಲ್ಲಾಗಲೆ ಭಸ್ಮವಾಗಿ ಹೋಗಿದ್ದವು. ಗುಡಿಸಲುಗಳಲ್ಲಿ ಯಾರು ಇಲ್ಲದೇ ಇದ್ದಿದ್ದರಿಂದ ಅಂದು ಯಾವುದೇ ಪ್ರಾಣಾಪಾಯವಾಗಿರಲಿಲ್ಲ. ಕೇವಲ ಬೆಂಕಿ ಹಚ್ಚಿದ್ದು ಮಾತ್ರವಲ್ಲ ಅಂದು 27 ದಲಿತರ ಮೇಲೆ ಹಲ್ಲೆಯಾಗಿತ್ತು. ಈ ಬಗ್ಗೆ ಅಂದು ಘಟನೆಯಲ್ಲಿ ಗಾಯಗೊಂಡವರು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸವರ್ಣೀಯರ ವಿರುದ್ದ ಜಾತಿ ನಿಂದನೆ (ಅಟ್ರಾಸಿಟಿ), ಕೊಲೆಗೆ ಯತ್ನ ಸೇರಿದಂತೆ ಅನೇಕ ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದು, ಬರೋಬ್ಬರಿ 117 ಸವರ್ಣೀಯರ ಮೇಲೆ ಎಫ್​ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT